– ಯೋಜನೆ ಹಣ ದುರ್ಬಳಕೆ ತಡೆಯಲು ಬಯೋಮೆಟ್ರಿಕ್ ಜಾರಿಗೆ ನಿರ್ಧಾರ
ಬೆಂಗಳೂರು: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಲ್ಲಿ (Gruhalakshmi Scheme) ಮೇಜರ್ ಬದಲಾವಣೆ ತರುವುದಕ್ಕೆ ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮೀ ಯೋಜನೆ ಹಣ ದುರ್ಬಳಕೆ ಆಗುವುದನ್ನು ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ನಿರ್ಧಾರ ಮಾಡಿದೆ.
ಗೃಹಲಕ್ಷ್ಮೀ ಹಣ ದುರಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಬರಲಿದೆ. ಬಯೋಮೆಟ್ರಿಕ್ ತರಲು ಎಲ್ಲಾ ತಯಾರಿ ಮುಕ್ತಾಯ ಆಗಿದೆ. ಶೀಘ್ರದಲ್ಲೇ ಬಯೋಮೆಟ್ರಿಕ್ ಜಾರಿ ಆಗಲಿದೆ. ಅನರ್ಹರಿಗೆ ಗೃಹಲಕ್ಷ್ಮಿ ಹಣ ಪಾವತಿಯಾಗೋದನ್ನ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಸತ್ತವರ ಅಕೌಂಟ್‌ಗೆ ಹಣ ಪಾವತಿ ಆಗೋದನ್ನ ತಡೆಗಟ್ಟಲು ಸರ್ಕಾರ ಈ ವ್ಯವಸ್ಥೆ ಜಾರಿಗೆ ಮುಂದಾಗಿದೆ. 2 ಲಕ್ಷ ಮಂದಿ ಮೃತಪಟ್ಟಿದ್ದರೂ ಫಲಾನುಭವಿಗಳಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ: ದಿನೇಶ್ ಗುಂಡೂರಾವ್
ಸುಮಾರು 125 ಕೋಟಿ ಹಣ ಫಲಾನುಭವಿಗಳ ಖಾತೆಯಿಂದ ಡ್ರಾ ಆಗಿಲ್ಲ. ಹೀಗಾಗಿ, ಗೃಹಲಕ್ಷ್ಮೀ ಯೋಜನೆಗೆ ಬಯೋಮೆಟ್ರಿಕ್ ಜಾರಿಗೆ ನಿರ್ಧಾರ ಮಾಡಲಾಗಿದೆ. ಇದು ಒನ್ ಟೈಂ ಬಯೋಮೆಟ್ರಿಕ್ ಪದ್ಧತಿ. ಒಂದು ಸಲ ಫಲಾನುಭವಿಗಳು ಬಯೋಮೆಟ್ರಿಕ್ ಕೊಟ್ಟರೆ ಸಾಕು ಬೆಂಗಳೂರು ಇನ್, ಇನ್ ಸೇವಾಕೇಂದ್ರ ಮತ್ತು ಗ್ರಾಮ ಒನ್‌ಗಳಲ್ಲಿ ಫಲಾನುಭವಿಗಳು ಬಯೋಮೆಟ್ರಿಕ್ ಕೊಡಬೇಕು.
