ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ಸರ್ಕಾರ ಪ್ರಕಟ ಮಾಡಿರೋ ಮಾರ್ಗಸೂಚಿಯಲ್ಲಿ ಏನಿದೆ? ಜನ ಏನು ಮಾಡಬೇಕು ಎಂಬುದಕ್ಕೆ ಇಲ್ಲಿದೆ ಮಾಹಿತಿ.
Advertisement
ಪರಿಷ್ಕೃತ ಮಾರ್ಗಸೂಚಿಯಲ್ಲಿ ಏನಿದೆ?
ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಬೇಕು. ಹೊರ ದೇಶದಿಂದ ಬರುವವರಿಗೆ ರ‍್ಯಾಂಡಮ್ ಸ್ಕ್ರೀನಿಂಗ್ ಮಾಡಬೇಕು ಮತ್ತು ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ. ಪಾಸಿಟಿವ್ ಆದ ಎಲ್ಲಾ ಸ್ವಾಬ್‌ಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗಾಗಿ ರವಾನೆ ಮಾಡಬೇಕು. ಇದನ್ನೂ ಓದಿ: ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ
Advertisement
Advertisement
ಪಾಸಿಟಿವ್ ಆಗಿದ್ರೆ ಅಥವಾ ರಿಪೋರ್ಟ್ ಬರುವವದಿದ್ದರೆ, ವ್ಯಕ್ತಿಯನ್ನ ಕ್ವಾರಂಟೈನ್ ಮಾಡಬೇಕು. ಕ್ವಾರಂಟೈನ್ ಅವಧಿ ಮುಗಿಯುವವರೆಗೂ ವೈದ್ಯರು ನಿಗಾ ಇಡಬೇಕು. ಎಲ್ಲಾ ಐಎಲ್‌ಐ ಸ್ಯಾರಿ ಕೇಸ್‌ಗಳ ಡೇಟಾವನ್ನು ಐಡಿಎಸ್‌ನಲ್ಲಿ ಅಪ್ಲೋಡ್ ಮಾಡಬೇಕು. ಆಸ್ಪತ್ರೆಗಳಿಗೆ ಐಎಲ್‌ಐ ಕೇಸ್‌ಗಳು ದಾಖಲಾದರೆ ಆರ್‌ಟಿ-ಪಿಸಿಆರ್ ಟೆಸ್ಟ್ ಮಾಡಬೇಕು.
Advertisement
ಜಿನೋಮ್ ಸೀಕ್ವೆನ್ಸಿಂಗ್‌ಗೆ ಸ್ವಾಬ್ ರವಾನೆ ಮಾಡಲು ಮಾರ್ಗಸೂಚಿ
ಕ್ಲಸ್ಟರ್‌ಗಳಲ್ಲಿ ಪಾಸಿಟಿವ್ ಬಂದ ಸ್ವಾಬ್‌ಗಳನ್ನು ಕಡ್ಡಾಯವಾಗಿ ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳಿಸಬೇಕು. ಬೆಂಗಳೂರು ಮತ್ತು ಇತರೆ ಜಿಲ್ಲೆಗಳಲ್ಲಿ ನಡೆಯುವ ಟೆಸ್ಟಿಂಗ್ ಕೇಂದ್ರಗಳಿಂದ ಆಯ್ದಾ ಸ್ವಾಬ್‌ಗಳನ್ನ ಜಿನೋಮ್ ಸೀಕ್ವೆನ್ಸಿಂಗ್‌ಗೆ ರವಾನೆ ಮಾಡಬೇಕು. ಇದನ್ನೂ ಓದಿ: ಕಾಂಗ್ರೆಸ್ ಹೋರಾಟದಿಂದ ಕೋವಿಡ್ ಹೆಚ್ಚಾದ್ರೆ ಅವರೇ ಹೊಣೆ: ಸಚಿವ ಸುಧಾಕರ್
ಸಮುದಾಯ ಮಟ್ಟದಲ್ಲಿ ಕೇಸ್ ಬ್ರೇಕ್ ಥ್ರೂ ಆಗಿದ್ದರೆ ಅಲ್ಲಿ ಸ್ಯಾಂಪಲ್ ಅನ್ನು ಜಿನೋಮ್ ಸೀಕ್ವೆನ್ಸಿಂಗ್‌ಗಾಗಿ ರವಾನೆ ಮಾಡಬೇಕು. ಅಂತಾರಾಷ್ಟ್ರೀಯ ಪ್ರಯಾಣಿಕರ ಸ್ಯಾಂಪಲ್ ಅನ್ನು ಕಡ್ಡಾಯವಾಗಿ ಜಿನೋಮ್ ಸೀಕ್ವೆನ್ಸಿಂಗ್‌ಗೆ ರವಾನೆ ಮಾಡಬೇಕು ಎಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ಪ್ರಕಟಿಸಿದೆ.
6 ರಿಂದ 14 ವರ್ಷದ ಮಕ್ಕಳಿಗೆ ಸೆರೋ ಸರ್ವೆ
ಎಲ್ಲಾ ಜಿಲ್ಲೆಗಳಲ್ಲಿ ಅಧಿಕಾರಿಗಳು ತಂಡ ರಚನೆ ಮಾಡಿಕೊಂಡು ಸೆರೋ ಸರ್ವೆ ಮಾಡಲು ಸೂಚನೆ ನೀಡಲಾಗಿದೆ. 6 ರಿಂದ 14 ವರ್ಷದ ಮಕ್ಕಳಿಗೆ ರೋಗನಿರೋಧಕ ಶಕ್ತಿ ಹೇಗಿದೆ. ಈಗಾಗಲೇ ಕೋವಿಡ್ ಬಂದು ಹೋಗಿದೆಯಾ ಹೇಗೆ ಅಂತಾ ಸೆರೋ ಸರ್ವೆ ಮಾಡಲು ಸರ್ಕಾರ ನಿರ್ಧರಿಸಿದ್ದು, ನಿಗದಿತ ಸಮಯದಲ್ಲಿ ಸೆರೋ ಸರ್ವೆ ಮಾಡಲು ಸೂಚನೆ ನೀಡಿದೆ.