ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕಾಗಿ ವಿವಿಧ ಇಲಾಖೆಯ ಮಧ್ಯೆ ಸಮನ್ವಯಕ್ಕಾಗಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಉತ್ಸವಕ್ಕೆ ಮುಂಚಿತವಾಗಿಯೇ ಕೋಮು ಸೌಹಾರ್ದ ಸಭೆ ನಡೆಸುವಂತೆ ತಿಳಿಸಿದೆ.
ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೂ ಸೇರಿದಂತೆ ಸುತ್ತೋಲೆ ಬಿಡುಗಡೆ ಮಾಡಿದೆ. ಉತ್ಸವಕ್ಕೂ ಮುಂಚೆ ನಾಗರಿಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಸಭೆ ನಡೆಸಲು ಸೂಚನೆ ನೀಡಿದೆ. ಇದನ್ನೂ ಓದಿ: ಮುಸ್ಲಿಂ ಕಾನೂನಿನಲ್ಲಿ ಪೋಷಕರ ಅನುಮತಿಯಿಲ್ಲದೇ ಅಪ್ರಾಪ್ತೆ ವಿವಾಹವಾಗಬಹುದು: ಕೋರ್ಟ್
Advertisement
Advertisement
ಆಗಸ್ಟ್ 30ರಿಂದ ಗೌರಿ ಗಣೇಶ ಹಬ್ಬವನ್ನು ರಾಜ್ಯದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಪ್ರಕ್ರಿಯ ಸಾಮಾನ್ಯವಾಗಿದ್ದು, ಈ ಸಂದರ್ಭದಲ್ಲಿ ಉತ್ಸವವನ್ನು ಆಯೋಜಿಸುವ ಆಯೋಜಕರಿಗೆ ಪರವಾನಗಿ ನೀಡುವುದು ವಿವಿಧ ಇಲಾಖೆಗಳ ಜವಾಬ್ದಾರಿಯಾಗಿರುತ್ತದೆ. ಈ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಮಹಾನಗರಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕ್ರಮ ವಹಿಬೇಕು ಎಂದು ಹೇಳಿದೆ. ಇದನ್ನೂ ಓದಿ: ಎಲ್ಲರೂ ನೂಪುರ್‌ಗೆ ಕ್ಷಮೆ ಕೇಳುವಂತೆ ಹೇಳಿದರು, ಆದರೆ ನಾನು ಮಾತ್ರ ಬೆಂಬಲ ನೀಡಿದ್ದೇನೆ: ರಾಜ್ ಠಾಕ್ರೆ
Advertisement
Advertisement
ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?
- ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್ ವಿದ್ಯುತ್ ಸಂಪರ್ಕ, ಪರವಾನಗಿಗಳನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ ಅಗ್ನಿಶಾಮಕ, ಪೋಲಿಸ್ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಪರವಾನಗಿ ನೀಡಲು ಸೂಕ್ತ ಕ್ರಮ ವಹಿಸುವುದು.
- ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್‌ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಿ ಪ್ರಚಾರ ಮಾಡುವುದು.
- ಕಾರ್ಯಕ್ರಮದ ಆಯೋಜಕರು ನಿಗಧಿತ ನಮೂನೆಯಲ್ಲಿ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ 3 ದಿನಗಳ ಒಳಗೆ ಪರವಾನಗಿ ನೀಡಲು ಕ್ರಮ ವಹಿಸುವುದು.
- ಪರವಾನಿಗೆ ನೀಡುವ ಮುನ್ನ ಆಯೋಜಕರಿಂದ ಸರ್ಕಾರ ಹಾಗೂ ನ್ಯಾಯಾಲಯದ ಆದೇಶಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆ ಪಡೆಯುವುದು
- ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮ ವಹಿಸುವಂತೆ ಆಯೋಜಕರಿಗೆ ಸೂಚಿಸುವುದು.
- ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವಂತೆ ಆಯೋಜಕರಿಗೆ ಸೂಚಿಸುವುದು.
- ವಿಶೇಷವಾಗಿ ಹೈ-ಟೆನ್ನನ್ ತಂತಿ ಹಾದು ಹೋಗಿರುವ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ಕೊಡುವಂತಿಲ್ಲ.
- ಉತ್ಸವಕ್ಕೆ ಮುಂಚಿತವಾಗಿ ನಾಗರೀಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ದ ಸಭೆಗಳನ್ನು ಆಯೋಜಿಸಲು ಕ್ರಮ ವಹಿಸುವುದು.