ಬೆಂಗಳೂರು: ಸಾರಿಗೆ ನಿಗಮಗಳ ನೌಕರರ (Transport Employees) ವೇತನವನ್ನು ಶೇ.15 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ (Karnataka Government) ಅಧಿಕೃತ ಆದೇಶ ಹೊರಡಿಸಿದೆ.
ಸಾರಿಗೆ ನೌಕರರ ಮುಷ್ಕರದ ಮೊದಲೇ ವೇತನ ಹೆಚ್ಚಿಸಿದೆ. ಮಾರ್ಚ್ 1 ರಿಂದ ಅನ್ವಯ ಆಗುವಂತೆ ವೇತನ ಹೆಚ್ಚಳ ಮಾಡಿದ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ- ಆದೇಶ ಕಾಯ್ದಿರಿಸಿದ ಹೈಕೋರ್ಟ್
ನಾಲ್ಕೂ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ.
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮಾ.21ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಇದರ ಬೆನ್ನಲ್ಲೇ ಶೇ.15ರಷ್ಟು ವೇತನ ಹೆಚ್ಚಿಸುವುದಾಗಿ ಸರ್ಕಾರ ತಿಳಿಸಿತ್ತು. ಅದರಂತೆ ವೇತನ ಹೆಚ್ಚಳ ಮಾಡಿದೆ. ಆದರೆ ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿದೆ. ಇದನ್ನೂ ಓದಿ: ಅಕಾಡೆಮಿ ಪ್ರಶಸ್ತಿ ವಿಜೇತರಿಗೆ ವರದಿಗಾರರ ಕೂಟ ಅಭಿನಂದನೆ