ಬೆಂಗಳೂರು: ಗ್ರೇಟರ್ ಬೆಂಗಳೂರು (Greater Bengaluru) ಪ್ರಾಧಿಕಾರದ ಅಡಿಯಲ್ಲಿ 5 ನಗರ ಪಾಲಿಕೆಗಳನ್ನ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಐದು ನಗರ ಪಾಲಿಕೆಗಳ ಗಡಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಪತ್ರದಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಬಿಬಿಎಂಪಿ ಕೇಂದ್ರ ಕಚೇರಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಚೇರಿಯನ್ನಾಗಿ ಮಾರ್ಪಾಡು ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ತರಾತುರಿಯಲ್ಲಿ ದೆಹಲಿಗೆ ತೆರಳಿದ ಡಿಕೆಶಿ – ಸಿಎಂ ಮುಜುಗರದ ಹೇಳಿಕೆಗಳಿಗೆ ಬೇಸತ್ರಾ ಡಿಸಿಎಂ?
5 ನಗರ ಪಾಲಿಕೆಗಳ ಹೆಸರು
1. ಬೆಂಗಳೂರು ಪಶ್ಚಿಮ ನಗರ ಪಾಲಿಕೆ
2. ಬೆಂಗಳೂರು ದಕ್ಷಿಣ ನಗರ ಪಾಲಿಕೆ
3. ಬೆಂಗಳೂರು ಉತ್ತರ ನಗರ ಪಾಲಿಕೆ
4. ಬೆಂಗಳೂರು ಪೂರ್ವ ನಗರ ಪಾಲಿಕೆ
5. ಬೆಂಗಳೂರು ಕೇಂದ್ರ ನಗರ ಪಾಲಿಕೆ
ಆಗಸ್ಟ್ 1 ರಿಂದ ಆರಂಭ ಆಗುವ ಮುಂಗಾರು ಅಧಿವೇಶನದಲ್ಲಿ ಈ ಕುರಿತು ಚರ್ಚೆ ಮಾಡಿ, ಬಿಲ್ ಪಾಸ್ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಅಲ್ಲದೇ ಪಾಲಿಕೆಗಳ ಬಗ್ಗೆ ಆಕ್ಷೇಪಣೆ ಇದ್ದರೆ, ಸಲಹೆ ನೀಡುವಂತೆ ಸಾರ್ವಜನಿಕರನ್ನು ಕೋರಿದೆ. ಇದನ್ನೂ ಓದಿ: 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ ವ್ಯಾಕ್ಸಿನ್ – ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ