ರಾಜ್ಯದ ಎಲ್ಲಾ 17 ಅಣೆಕಟ್ಟೆಗಳಿಗೆ ಭದ್ರತೆ ಒದಗಿಸಲು ಸರ್ಕಾರ ಆದೇಶ

Public TV
1 Min Read
KRS

ಬೆಂಗಳೂರು: ರಾಷ್ಟ್ರದ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಎಲ್ಲಾ 17 ಅಣೆಕಟ್ಟೆಗಳಿಗೆ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಮಾಡಿಕೊಂಡು ಹೆಚ್ಚಿನ ಭದ್ರತೆ ಒದಗಿಸಲು ಸರ್ಕಾರ ಆದೇಶಿಸಿದೆ. ತಮ್ಮ ನಿಗಮ ಮತ್ತು ವಲಯ ವ್ಯಾಪ್ತಿಯಲ್ಲಿ ಬರುವ ಅಣೆಕಟ್ಟೆಗಳಿಗೆ ಭದ್ರತೆ ನೀಡಲು ಸೂಚನೆ ನೀಡಿದೆ.

ಒಂದು ವೇಳೆ ಭದ್ರತೆಯಲ್ಲಿ ಯಾವುದೇ ಚ್ಯುತಿಯಾದಲ್ಲಿ ಸಂಬಂಧಪಟ್ಟ ಯೋಜನಾಧಿಕಾರಿ ಅಥವಾ ಅಣೆಕಟ್ಟು ಅಧಿಕಾರಿಗಳೇ ಹೊಣೆಗಾರರು ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ಯಾವ್ಯಾವ ಅಣೆಕಟ್ಟೆಗಳು?
ಕಾವೇರಿ‌ ನೀರಾವರಿ ನಿಗಮ ನಿಯಮಿತ- ಬೆಂಗಳೂರು, ಕರ್ನಾಟಕ ನೀರಾವರಿ ನಿಗಮ ನಿಯಮಿತ- ಬೆಂಗಳೂರು, ಕೃಷ್ಣ ಭಾಗ್ಯ ಜಲನಿಗಮ ನಿಯಮಿತ- ಬೆಂಗಳೂರು, ವಿಶ್ವೇಶ್ವರಯ್ಯ ಜಲನಿಗಮ ನಿಯಮಿತ- ಬೆಂಗಳೂರು, ಮುಖ್ಯ ಎಂಜಿನಿಯರ್ ನೀರಾವರಿ ದಕ್ಷಿಣ- ಮೈಸೂರು, ಹೇಮಾವತಿ ನಾಲಾವಲಯ- ತುಮಕೂರು, ಹೇಮಾವತಿ ಯೋಜನೆ- ಗೊರೂರು, ನೀರಾವರಿ ಉತ್ತರ- ಬೆಳಗಾವಿ, ತುಂಗಾ ಮೇಲ್ದಂಡೆ- ಶಿವಮೊಗ್ಗ, ಮಲಪ್ರಭಾ ಯೋಜನಾ ವಲಯ- ಧಾರವಾಡ, ಮುನಿರಾಬಾದ್ ನೀರಾವರಿ ಕೇಂದ್ರ ವಲಯ, ನೀರಾವರಿ ಯೋಜನಾ ವಲಯ- ಕಲಬುರಗಿ, ಭದ್ರಾ ಮೇಲ್ದಂಡೆ ಯೋಜನೆ- ಚಿತ್ರದುರ್ಗ, ಆಲಮಟ್ಟಿ ಅಣೆಕಟ್ಟು ವಲಯ, ಕಾಲುವೆ 1 ಭೀಮರಾಯನಗುಡಿ, ಕಾಲುವೆ 2- ರಾಂಪುರ, ನಾರಾಯಣಪುರ ಅಣೆಕಟ್ಟು

Share This Article