ಬೆಂಗಳೂರು: ರಾಜ್ಯದಲ್ಲಿ ಪಿಯುಸಿ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈಗ ಪಿಯುಸಿ ಅತಿಥಿ ಉಪನ್ಯಾಸಕರ ಗೌರವಧನ 3 ಸಾವಿರ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ನೇಮಕಗೊಂಡು ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ನೀಡಲಾಗುತ್ತಿದ್ದ ಮಾಸಿಕ ಗೌರವಧನ 9,000 ರೂ.ನ್ನು ಪರಿಷ್ಕರಿಸಿ 12,000 ರೂ.ಗೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ
Advertisement
Advertisement
ಇತ್ತೀಚೆಗೆಷ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಿ ಆದೇಶ ಹೊರಡಿಸಲಾಗಿತ್ತು. ಅದರಂತೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು 9,000 ರೂ.ನಿಂದ 15,000 ರೂ.ಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮನವಿ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದರು.
Advertisement
Advertisement
ಈಗ ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಜೊತೆಗೆ ಗೌರವಧನ ಹೆಚ್ಚಿಸುವ ಸಂಬಂಧ ರಾಜ್ಯ ಸರ್ಕಾರ ಎರಡು ಮಹತ್ವದ ಆದೇಶ ಹೊರಡಿಸಿದೆ. ಇದನ್ನೂ ಓದಿ: ಕನ್ನಡ ರಾಜ್ಯೋತ್ಸವಕ್ಕೆ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ