ಬೆಂಗಳೂರು: ನೆರೆಯ ರಾಜ್ಯಗಳ ಮದ್ಯ ಮಾರಾಟ ದರವನ್ನು (Liquor Price) ಪರಿಗಣಿಸಿ ರಾಜ್ಯದಲ್ಲೂ ದುಬಾರಿ ಮದ್ಯವನ್ನು ಅಗ್ಗದ ದರದಲ್ಲಿ ನೀಡಲು ಸರ್ಕಾರ (Karnatak Government) ಚಿಂತನೆ ನಡೆಸಿದೆ. ಅಬಕಾರಿ ಆದಾಯ ಹೆಚ್ಚಿಸಲು ಮದ್ಯದ ದರ ಇಳಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಇದರಿಂದಾಗಿ ಶೀಘ್ರದಲ್ಲೇ ಮದ್ಯ ದರ ಇಳಿಕೆಯಾಗುವ ಸಾಧ್ಯತೆ ಇದೆ.
ನೆರೆಹೊರೆಯ ರಾಜ್ಯಕ್ಕಿಂತ ನಮ್ಮ ರಾಜ್ಯದಲ್ಲಿ ಮದ್ಯದ ದರ ಹೆಚ್ಚಿದೆ. ಹೀಗಾಗಿ ಗಡಿಭಾಗದ ಜನ ಅನ್ಯ ರಾಜ್ಯಕ್ಕೆ ತೆರಳಿ ಮದ್ಯ ಖರೀದಿ ಮಾಡುತ್ತಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ರೂ. ಹಣ ನಷ್ಟವಾಗುತ್ತಿತ್ತು. ಈ ನಷ್ಟವನ್ನು ತಪ್ಪಿಸಲು ಮದ್ಯ ದರ ಇಳಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದನ್ನೂ ಓದಿ: MUDA Scam| ಜಮೀನಿಗೆ ಮಾರುಕಟ್ಟೆ ದರ ಒಪ್ಪದೇ ಸೈಟ್ ಪಡೆದಿದ್ದ ಸಿಎಂ ಪತ್ನಿ
Advertisement
Advertisement
ಹೀಗಾಗಿ 16 ಸ್ಲ್ಯಾಬ್‌ಗಳ ದರ ಇಳಿಕೆಗೆ ಅಬಕಾರಿ ಇಲಾಖೆ ಮುಂದಾಗಿದ್ದು, ಸೆ.1 ರಿಂದ ರಾಜ್ಯದಲ್ಲಿ ದುಬಾರಿ ಮದ್ಯ ಕಡಿಮೆ ಬೆಲೆಗೆ ಸಿಗಲಿದೆ. ದುಬಾರಿ ಬೆಲೆಯ ಬ್ರಾಂದಿ, ವಿಸ್ಕಿ ಜಿನ್, ರಮ್ ಈ ತಿಂಗಳಲ್ಲೇ ಅಗ್ಗವಾಗಲಿದೆ. ಪ್ರತಿ ಬ್ರ್ಯಾಂಡ್ ಮದ್ಯದ ಪರಿಷ್ಕøತ ದರ ಪಟ್ಟಿ ಶುಕ್ರವಾರ (ಇಂದು) ಅಥವಾ ಶನಿವಾರ ಬಿಡುಗಡೆಯಾಗುವ ಸಂಭವವಿದೆ.
Advertisement
Advertisement
ನೆರೆಹೊರೆಯ ರಾಜ್ಯಗಳ ಮದ್ಯ ಮಾರಾಟ ದರವನ್ನು ಪರಿಗಣಿಸಿ ಕರ್ನಾಟಕದಲ್ಲೂ ಮದ್ಯದ ದರ ಪರಿಷ್ಕರಣೆ ಮಾಡಲಾಗುವುದು ಎಂದು ಮುಖ್ಯಮಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ ಘೋಷಿಸಿದ್ದರು. ಬಳಿಕ ಜುಲೈನಿಂದ ದರ ಹೆಚ್ಚಳ ಆಗಬೇಕಿತ್ತು, ಆದರೆ ಸಿಎಂ ಸೂಚನೆಯ ಮೇರೆಗೆ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು. ಇದನ್ನೂ ಓದಿ: ಪ್ರಾಸಿಕ್ಯೂಷನ್ ವಾರ್ – ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸಲು ಮುಂದಾದ ಕಾಂಗ್ರೆಸ್