ಬೆಂಗಳೂರು: ತಳವಾರ (Talawara) ಮತ್ತು ಪರಿವಾರ ನಾಯಕ (Parivara Nayaka) ಜಾತಿಗಳನ್ನು ಹಿಂದುಳಿದ ವರ್ಗಗಳ (OBC) ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ.
ತಳವಾರ ಮತ್ತು ಪರಿವಾರ ಜಾತಿಗಳನ್ನು ಎಸ್ಟಿ ವರ್ಗಕ್ಕೆ ಸೇರ್ಪಡೆ ಮಾಡಿದ ಹಿನ್ನೆಲೆ, ಒಬಿಸಿ ಮೀಸಲಾತಿ ಜಾತಿ ಪಟ್ಟಿಯಿಂದ ಈ ಜಾತಿಗಳನ್ನು ರಾಜ್ಯ ಸರ್ಕಾರ ತೆಗೆದುಹಾಕಿದೆ. ಇದನ್ನೂ ಓದಿ: SSLC ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ – ಏಪ್ರಿಲ್ 1ರಿಂದ ಪರೀಕ್ಷೆ ಆರಂಭ
Advertisement
Advertisement
ಈ ಜಾತಿಗಳನ್ನು ಒಬಿಸಿ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕುವ ಸಂಬಂಧ ಸರ್ಕಾರದ ಪ್ರಸ್ತಾವನೆಗೆ ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ. ಹೀಗಾಗಿ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.
Advertisement
Advertisement
ಎಸ್ಟಿ ವರ್ಗಕ್ಕೆ ಪರಿವಾರ ಮತ್ತು ತಳವಾರ ಜಾತಿಗಳನ್ನು ಸೇರಿಸಿರುವ ಹಿನ್ನೆಲೆಯಲ್ಲಿ ಸದರಿ ಜಾತಿಗಳಿಗೆ ಸರ್ಕಾರವು ಪರಿಶಿಷ್ಟ ಪಂಗಡದ ಪ್ರಮಾಣಪತ್ರಗಳನ್ನು ವಿತರಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ನಿರ್ದೇಶನ ನೀಡಿದೆ. ಇದನ್ನೂ ಓದಿ: ಇನ್ಸ್‌ಪೆಕ್ಟರ್ ನಂದೀಶ್ ತೆಗೆದುಕೊಂಡ ತೀರ್ಮಾನ ರಾಂಗ್ – ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಎಂಟಿಬಿ