ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಸೈಕಲ್ ಶಾಕ್ ಕೊಟ್ಟಿದ್ದ ರಾಜ್ಯ ಸರ್ಕಾರ ಈಗ ಮತ್ತೊಂದು ಶಾಕ್ ಕೊಟ್ಟಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ನೀಡುತ್ತಿದ್ದ ಶೂ ಮತ್ತು ಸಾಕ್ಸ್ ಈ ವರ್ಷ ಸಿಗೋದು ಡೌಟ್ ಅನಿಸುತ್ತಿದೆ.
Advertisement
ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶೂ ಮತ್ತು ಸಾಕ್ಸ್ ಯೋಜನೆಗೆ ಈ ವರ್ಷ ಸರ್ಕಾರ ಹಣವೇ ಇಟ್ಟಿಲ್ಲ. ಸರ್ಕಾರಿ ಶಾಲೆಗ ಸೇರುವ 1 ರಿಂದ 10ನೇ ತರಗತಿ ವರೆಗಿನ ಬಡ ವಿದ್ಯಾರ್ಥಿಗಳು ಮತ್ತು ಸರ್ಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಹಾಗೂ ಖಾಸಗಿ ಶಾಲೆಗಳೊಂದಿಗೆ ಸ್ಪರ್ಧೆ ಮಾಡಲು ರಾಜ್ಯ ಸರ್ಕಾರ ಪ್ರತಿ ವಿದ್ಯಾರ್ಥಿಗೆ ಒಂದು ಜೊತೆ ಶೂ ಮತ್ತು 2 ಎರಡು ಜೊತೆ ಸಾಕ್ಸ್ ನೀಡುವ ಯೋಜನೆ 2016ರಲ್ಲಿ ಜಾರಿ ಮಾಡಲಾಗಿತ್ತು. 2019-20ನೇ ಸಾಲಿನ ಕೊನೆದಾಗಿ ಸರ್ಕಾರ ಈ ಯೋಜನೆಗೆ ಹಣ ಬಿಡುಗಡೆ ಮಾಡಿತ್ತು. 2020-21, 2021-22 ಮತ್ತು ಈ ವರ್ಷ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಭಾಗ್ಯವೇ ಇಲ್ಲದಂತೆ ಆಗಿದೆ. ಇದನ್ನೂ ಓದಿ: ಸರ್ಕಾರದ ವಿವಿಧ ಯೋಜನೆ – ರಾಜ್ಯಪಾಲರಿಂದ ಫಲಾನುಭವಿಗಳೊಂದಿಗೆ ಸಂವಾದ
Advertisement
Advertisement
ಎರಡು ವರ್ಷ ಕೊರೊನಾ ಕಾರಣ ನೀಡಿ ಸರ್ಕಾರ ಮಕ್ಕಳಿಗೆ ಶೂ, ಸಾಕ್ಸ್ ನೀಡಿರಲಿಲ್ಲ. ಈ ವರ್ಷ ಶಾಲೆಗಳು ಪ್ರಾರಂಭ ಆಗಿ ಒಂದೂವರೆ ತಿಂಗಳು ಕಳೆಯಿತು. ಈವರೆಗೂ ಈ ಬಗ್ಗೆ ಯಾವುದೇ ಚರ್ಚೆಯನ್ನು ಮಾಡಿಲ್ಲ ಸರ್ಕಾರ. ಶಿಕ್ಷಣ ಇಲಾಖೆ ಮೂಲಗಳ ಮಾಹಿತಿ ಪ್ರಕಾರ ಈ ವರ್ಷವೂ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಸಿಗೋದು ಡೌಟ್. ಸರ್ಕಾರಕ್ಕೆ ಆರ್ಥಿಕ ಕಷ್ಟ ಎದುರಾಗಿದೆ. ಅಲ್ಲದೆ ಈ ವರ್ಷ 15 ಸಾವಿರ ಶಿಕ್ಷಕರ ನೇಮಕ, ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನ, ಶಾಲಾ ಕೊಠಡಿಗಳ ರಿಪೇರಿಗೆ ಆದ್ಯತೆ ಕೊಡಲಾಗುತ್ತಿದೆ. ಹಾಗಾಗಿ ಮಕ್ಕಳಿಗೆ ಅನುಕೂಲ ಆಗೋ ಸೈಕಲ್, ಶೂ, ಸಾಕ್ಸ್ ಭಾಗ್ಯವನ್ನು ಕೈ ಬಿಡೋ ಪ್ಲಾನ್ ಸರ್ಕಾರ ಮಾಡಿದೆ ಎಂದು ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಹೊಸದಾಗಿ ಗೆದ್ದವರ ಕ್ಷೇತ್ರಗಳು ಡೇಂಜರ್ – ಬಿಜೆಪಿ ಇಂಟರ್ನಲ್ ರಿಪೋರ್ಟ್ ಔಟ್
Advertisement
ಸರ್ಕಾರಿ ಶಾಲೆಗಳಲ್ಲಿ ಸುಮಾರು 60-70 ಲಕ್ಷ ಮಕ್ಕಳು ಈ ಯೋಜನೆಯ ಫಲಾನುಭವಿಗಳು. 1-5ನೇ ತರಗತಿಗೆ 225 ರೂ. 6-8ನೇ ತರಗತಿಗೆ 250 ರೂ. ಮತ್ತು 9-10 ನೇ ತರಗತಿ ವಿದ್ಯಾರ್ಥಿಗಳಿಗೆ 275 ರೂ. ನಂತೆ ಶೂಗೆ ದರ ನಿಗದಿ ಮಾಡಲಾಗಿದೆ. ಆದ್ರೆ ಇದಕ್ಕೆ ಈಗ ಆರ್ಥಿಕ ಕಾರಣ ಎಂದು ಸರ್ಕಾರ ಉತ್ತರಿಸುತ್ತಿದೆ.