– 60 ಸಾವಿರ ಬಿಪಿಎಲ್ ಕಾರ್ಡ್‌ಗಳು ಎಪಿಎಲ್‌ಗೆ ಶಿಫ್ಟ್
ಬೆಂಗಳೂರು: ಬಿಪಿಎಲ್, ಎಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಆಧಾರ್(ಇ ಕೆವೈಸಿ) ಜೋಡಣೆಯಾಗದ ಬಿಪಿಎಲ್, ಎಪಿಎಲ್ ಕಾರ್ಡ್‌ಗಳನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಅಮಾನತು ಮಾಡಿದೆ.
Advertisement
ಈಗಾಗಲೇ ಲಕ್ಷಾಂತರ ಎಪಿಎಲ್ ಕಾರ್ಡ್‌ಗಳು ರದ್ದಾಗಿದ್ದು 60 ಸಾವಿರ ಬಿಪಿಎಲ್ ಕಾರ್ಡ್‌ಗಳನ್ನು (BPL Card) ಎಪಿಎಲ್‌ಗೆ ಶಿಫ್ಟ್ ಮಾಡಲಾಗಿದೆ. ರೇಷನ್ ಅಂಗಡಿಗೆ (Ration Shop) ತೆರಳಿದಾಗಲೇ ಈ ವಿಚಾರ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿದ ಬೆನ್ನಲ್ಲೇ ಆಹಾರ ಇಲಾಖೆ ಈಗ ಎಪಿಎಲ್ ಕಾರ್ಡ್ದಾರರಿಗೂ ಬಿಸಿ ಮುಟ್ಟಿಸಿದೆ.
Advertisement
22 ಲಕ್ಷ ಎಪಿಎಲ್ (APL Card) ಮತ್ತು ಬಿಪಿಎಲ್ ಕಾರ್ಡ್‌ಗಳನ್ನು (BPL Card) ಆಹಾರ ಇಲಾಖೆ ಅಮಾನತು ಮಾಡಿದ್ದು ಸರಿಯಾಗಿ ಕೆವೈಸಿ ಜೋಡಣೆಯಾದ ಬಳಿಕ ಈ ಕಾರ್ಡ್‌ದಾರರಿಗೆ ಅಕ್ಕಿ ಸಿಗಲಿದೆ. ಇದನ್ನೂ ಓದಿ: ನನ್ನನ್ನ ಮುಟ್ಟಿದರೆ ಹುಷಾರ್ – ಸದ್ದಿಲ್ಲದೇ ಅಹಿಂದ ಶಕ್ತಿ ಪ್ರದರ್ಶನಕ್ಕೆ ಮುಂದಾದ ಸಿಎಂ
Advertisement
ರಾಜ್ಯದಲ್ಲಿ ಪ್ರಸ್ತುತ 25,62,562 ಎಪಿಎಲ್ ಕಾರ್ಡ್ಗಳಿದ್ದು 87,86,886 ಸದಸ್ಯರಿದ್ದಾರೆ. ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ’ಯಡಿ ಎಪಿಎಲ್ ಹೊಂದಿರುವ ಪ್ರತಿ ಕಾರ್ಡ್‌ಗೆ ಕೆಜಿ ಅಕ್ಕಿಗೆ 15 ರೂ.ನಂತೆ 10 ಕೆಜಿ ಅಕ್ಕಿ ನೀಡಲಾಗುತ್ತದೆ.
Advertisement
ಬಿಪಿಎಲ್ ಆಪರೇಷನ್:
ಬಿಪಿಎಲ್ ಕಾರ್ಡಿಗೆ (BPL Card) ಕೆಲವೊಂದು ಷರತ್ತು ಹಾಕುವ ಮೂಲಕ ಉಳಿತಾಯಕ್ಕೆ ಸರ್ಕಾರ ಪ್ಲ್ಯಾನ್ ಮಾಡಿಕೊಂಡಿದೆ. ಆಪರೇಷನ್ ಬಿಪಿಎಲ್ ಕಾರ್ಡ್‌ಗೆ (Operation BPL Card) ಸಿಎಂ ಸಿದ್ದರಾಮಯ್ಯ ಸೂಚಿಸಿದ ಬೆನ್ನಲ್ಲೇ ಇಲಾಖೆಯಿಂದ ಬೋಗಸ್ ಕಾರ್ಡ್ ತಡೆಯುವ ಸಲುವಾಗಿ ರಾಜ್ಯಾದ್ಯಂತ ರೇಷನ್ ಕಾರ್ಡ್ ಪರಿಶೀಲನೆ ಕಾರ್ಯ ನಡೆದಿತ್ತು. ಇದನ್ನೂ ಓದಿ: ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ – ಶೀಘ್ರವೇ ಆಪರೇಷನ್ ಬಿಪಿಎಲ್ ಕಾರ್ಡ್
ಅಕ್ರಮ ಫಲಾನುಭವಿಗಳನ್ನು ಪತ್ತೆ ಹಚ್ಚಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಾಲ್ಕು ಬೇರೆ ಇಲಾಖೆಗಳ ಸಹಕಾರ ಪಡೆಯಲಿದೆ ಎಂದು ಹಿಂದೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಕಾರ್ಡ್‌ದಾರರ ಹೆಸರಲ್ಲಿ ವಾಹನ ಇವೆಯಾ ಎಂಬುದನ್ನು ಪತ್ತೆ ಹಚ್ಚಲು ಸಾರಿಗೆ ಇಲಾಖೆ, ಜಮೀನು ಎಷ್ಟಿದೆ ಎಂಬುದನ್ನು ತಿಳಿಯಲು ಕಂದಾಯ ಇಲಾಖೆ, ತೆರಿಗೆ ಪಾವತಿದಾರರಾ ಎಂಬುದನ್ನು ಪತ್ತೆ ಹಚ್ಚಲು ಆದಾಯ ತೆರಿಗೆ ಇಲಾಖೆಯ ನೆರವು ಪಡೆದು ಆಪರೇಷನ್‌ಗೆ ಮಾಡಲಿದೆ ಎಂದು ವರದಿಯಾಗಿತ್ತು.
ಎಪಿಎಲ್ ರದ್ದಾದ್ರೆ ಏನೆಲ್ಲ ಸೌಲಭ್ಯ ಸಿಗಲ್ಲ?
1. ಎಪಿಎಲ್ ರದ್ದತಿಯಿಂದ ಗೃಹಲಕ್ಷ್ಮೀ ಯೋಜನೆಯಡಿ ಪಡೆಯುತ್ತಿದ್ದ ಹಣ ಸ್ಥಗಿತ
2. ಕುಟುಂಬದ ಐಡಿ ಕಾರ್ಡ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
3. ಸರ್ಕಾರಿ ಕೆಲಸಗಳಿಗೆ ಅರ್ಜಿ ಸಲ್ಲಿಸಲು ಆಗಲ್ಲ
4. ವಿವಿಧ ಸರ್ಕಾರಿ ಸೌಲಭ್ಯ ಸಿಗಲ್ಲ
5. ಆಯುಷ್ಮಾನ್ ಭಾರತ್ ಯೋಜನೆ ಲಾಭ ಪಡೆಯಲು ಸಾಧ್ಯವಿಲ್ಲ.
6. ರಿಯಾಯಿತಿ ದರದಲ್ಲಿ ಅಕ್ಕಿ ಸಿಗಲ್ಲ
ರದ್ದು ಯಾಕೆ?
ಆದಾಯ ತೆರಿಗೆ ಪಾವತಿ, ಸರ್ಕಾರಿ ನೌಕರರಾಗಿದ್ದರೂ ಬಿಪಿಎಲ್ ಕಾರ್ಡ್ ಬಳಸಿ ಸರ್ಕಾರಿ ಯೋಜನೆಗಳ ಲಾಭ ಪಡೆಯುತ್ತಿದ್ದಕ್ಕೆ ಕಾರ್ಡ್ ರದ್ದು ಮಾಡಲಾಗಿದೆ.