ಬೆಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ(ಎನ್‌ಐಎ) ವಹಿಸಲಾಗಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಪೊಲೀಸ್ ಮಹಾನಿರ್ದೇಶಕರ ಜೊತೆ ಚರ್ಚಿಸಿದ್ದೇನೆ. ಇದು ಅಂತರಾಜ್ಯ ಪ್ರಕರಣವಾದ ಕಾರಣ ಎನ್‌ಐಎಗೆ ವಹಿಸಲಾಗುವುದು ಎಂದು ತಿಳಿಸಿದರು.
Advertisement
Advertisement
ಕರ್ನಾಟಕ ಮತ್ತು ಕೇರಳದ ಗಡಿಯಲ್ಲಿ ಸಿಸಿಟಿವಿಯನ್ನು ಅಳವಡಿಸಬೇಕು. ಈ ಸಂಬಂಧ ಕೇಂದ್ರಕ್ಕೆ ಪತ್ರ ಬರೆಯಲು ಗೃಹ ಇಲಾಖೆಗೆ ಸೂಚನೆ ಕೊಡುತ್ತೇನೆ ಎಂದು ಹೇಳಿದರು.
Advertisement
ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ತಂಡಗಳನ್ನು ರಚಿಸಲಾಗಿದೆ. ಮಂಗಳೂರಲ್ಲಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದರು.
Advertisement
ದೇಶದ ಭದ್ರತೆಗೆ ಧಕ್ಕೆ ತರುವ ಭಯೋತ್ಪಾದನಾ ಇತ್ಯಾದಿ ರೀತಿ ಪ್ರಕರಣವನ್ನು ಎನ್‌ಐಎಗೆ ವಹಿಸಲಾಗುತ್ತದೆ. ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ಎನ್‌ಐಎಗೆ ಈ ಹಿಂದೆ ಶಿವಮೊಗ್ಗ ಹರ್ಷ ಕೊಲೆಯ ಪ್ರಕರಣವನ್ನು ವಹಿಸಲಾಗಿದ್ದು ತನಿಖೆ ನಡೆಯುತ್ತಿದೆ.