ಕೋಲಾರ: ಬೆಂಗಳೂರನ್ನು (Bengaluru) ಶಕ್ತಿ ಕೇಂದ್ರವನ್ನಾಗಿ ಮಾಡುವುದು ನಮ್ಮ ಉದ್ದೇಶ ಕೆಂಪೇಗೌಡರು (Kempe Gowda) ನಮ್ಮ ಇಡೀ ನಾಡಿಗೆ ಪ್ರೇರಣಾ ಶಕ್ತಿ. ಇಡೀ ವಿಶ್ವದ ಗಮನ ಸೆಳೆಯುವ ನಿಟ್ಟಿನಲ್ಲಿ ಬೆಂಗಳೂರು ಅಭಿವೃದ್ಧಿಯಾಗುತ್ತಿದೆ ಹಾಗಾಗಿ ಕೆಂಪೇಗೌಡರು ನಮಗೆಲ್ಲಾ ಪ್ರೇರಣೆ, ಸ್ಪೂರ್ತಿಯಾಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ (Ashwathnarayan) ಹೇಳಿದರು.
Advertisement
ಕೋಲಾರದಲ್ಲಿ (Kolara) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರು ನಿರ್ಮಾತೃ ಕೆಂಪೇಗೌಡರವರನ್ನು ವಿಶ್ವಕ್ಕೆ ಪರಿಚಯಿಸುವ ಉದ್ದೇಶದಿಂದ ನಮ್ಮ ಸರ್ಕಾರ ಕೆಂಪೇಗೌಡರ ಪ್ರತಿಮೆ ನಿರ್ಮಿಸಿದೆ. ಈ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಉದ್ಘಾಟನೆ ಮಾಡಲಿದ್ದಾರೆ. ಇದನ್ನೂ ಓದಿ: ಉಭಯ ದೇಶಗಳ ಪಾಲುದಾರಿಕೆಗೆ ಉತ್ಸುಕನಾಗಿದ್ದೇನೆ – ಮೋದಿ ಜೊತೆ ಸುನಾಕ್ ಮಾತು
Advertisement
Advertisement
ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು ಅದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ ಅದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ: ಕರ್ನಾಟಕಕ್ಕೆ ‘ಚಿನ್ನ’