ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ (Karnataka Government) ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು (Liverpool University) ಮಹತ್ವದ ಒಡಂಬಡಿಕೆಗೆ ಸಹಿ ಹಾಕಿವೆ.
ಸಿಎಂ ಸಿದ್ದರಾಮಯ್ಯ (Siddaramaiah), ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು. ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್‌ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ ಪುಷ್ಪನಾಥನ್, ಮಿಷನ್‌ನ ಉಪ ಮುಖ್ಯಸ್ಥ ಜೇಮ್ಸ್ ಗೋಡ್ಬರ್, ಲಿವರ್ ಪೂಲ್ ವಿ.ವಿ.ಯ ಕುಲಪತಿ ಪ್ರೊ.ಟಿಮ್ ಜೋನ್ಸ್, ಮತ್ತು ಸಮ-ಕುಲಪತಿ ಪ್ರೊ.ತಾರಿಕ್ ಅಲಿ ಅವರು ಅಂಕಿತಕ್ಕೆ ಸಹಿ ಹಾಕಿದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಹೈಕೋರ್ಟ್ ತೀರ್ಪುನ್ನು ನಾವು ಗೌರವಿಸುತ್ತೇವೆ: ಅಶೋಕ್
Advertisement
ಮುಖ್ಯಮಂತ್ರಿ @siddaramaiah ಅವರ ಸಮ್ಮುಖದಲ್ಲಿ ಯುನೈಟೆಡ್ ಕಿಂಗ್‌ಡಮ್ ನ ಲಿವರ್ ಪೂಲ್ ವಿಶ್ವವಿದ್ಯಾಲಯದ ಜೊತೆ ಎಂಒಯು ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಲಿವರ್ ಪೂಲ್ ವಿವಿಯ ಉಪಕುಲಪತಿಗಳಾದ ಟಿಮ್ ಜೋನ್ಸ್, ಉನ್ನತ ಶಿಕ್ಷಣ ಸಚಿವರಾದ ಎಂ.ಸಿ.ಸುಧಾಕರ್ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/KY5r0rQtrC
— CM of Karnataka (@CMofKarnataka) February 7, 2025
Advertisement
ಆವಿಷ್ಕಾರ ಕಾರ್ಯಕ್ರಮಗಳು ಹಾಗೂ ಶಿಕ್ಷಣ ಸಹಕಾರಕ್ಕೆ ಸಂಬಂಧಿಸಿದ ಸಹಭಾಗಿತ್ವವನ್ನು ಸದೃಢಗೊಳಿಸುವ ಜೊತೆಗೆ, ಅದನ್ನು ಉನ್ನತ ಸ್ತರಕ್ಕೆ ಕೊಂಡೊಯ್ಯಲು ಜಂಟಿ ಕಾರ್ಯತಂಡ ರಚಿಸುವ ಗುರಿಯನ್ನು ಈ ಒಡಂಬಡಿಕೆ ಹೊಂದಿದೆ.
Advertisement
Advertisement
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಉನ್ನತ ಶಿಕ್ಷಣ ಪರಿಷತ್‌ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಕೆ.ಜಿ.ಚಂದ್ರಶೇಖರ ಸೇರಿದಂತೆ ಇತರರು ಇದ್ದರು. ಇದನ್ನೂ ಓದಿ: ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ – ಬಂಧನ ಭೀತಿಯಿಂದ ಪಾರು