ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಜ್ಯಾದ್ಯಂತ 4.30 ಲಕ್ಷ ಗೃಹಲಕ್ಷ್ಮಿ (Gruhalakshmi Scheme) ಫಲಾನುಭವಿಗಳ ಹೆಸರುಗಳನ್ನು ಡಿಲೀಟ್ ಮಾಡಿದೆ.
ಸತ್ತವರ ಅಕೌಂಟ್‌ಗೆ ಹಣ ಹೋಗುತ್ತಿದೆ ಹಾಗೂ ಯೋಜನೆಯ ಹಣ ದುರ್ಬಳಕೆ ಆಗುತ್ತಿದ್ದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪರಿಷ್ಕರಣೆ ಮಾಡಲು ನಿರ್ಧರಿಸಿತ್ತು. ಅದರಂತೆ ಗ್ರಾಮ ಪಂಚಾಯಿತಿವಾರು ಆಶಾ ಕಾರ್ಯಕರ್ತೆಯರು ಮಾಹಿತಿ ಸಂಗ್ರಹಿಸಿದ್ದರು. ಒಟ್ಟು 1.20 ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಮೃತಪಟ್ಟವರನ್ನು ಕೈಬಿಡಲಾಗಿದೆ. ಸದ್ಯ 4.30 ಲಕ್ಷ ಫಲಾನುಭವಿಗಳ ಹೆಸರನ್ನು ಡಿಲೀಟ್ ಮಾಡಲಾಗಿದ್ದು, ಈ ಮೂಲಕ ನೂರಾರು ಕೋಟಿ ರೂ. ಉಳಿತಾಯ ಆಗಲಿದೆ. ಇದನ್ನೂ ಓದಿ: PublicTV Explainer: ಆರ್ಥಿಕ ದುಸ್ಥಿತಿ, ಮನೆ ಸಮಸ್ಯೆ, ಪಾಲನೆ ಕಷ್ಟ – ಮಕ್ಕಳು ಬೇಡ ಎನ್ನುತ್ತಿದ್ದಾರೆ ಭಾರತೀಯರು!
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಒಟ್ಟು 2,8,030 ಮಹಿಳೆಯರು ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 6,624 ಮೃತರ ಖಾತೆಗೆ ಯೋಜನೆಯ ಹಣ ಜಮೆಯಾಗಿದೆ. ಜೊತೆಗೆ ಐಟಿ-ಜಿಎಸ್‌ಟಿ ಪಾವತಿಸುತ್ತಿರುವ 4,800 ಫಲಾನುಭವಿಗಳು ಪತ್ತೆಯಾಗಿದ್ದಾರೆ. ಸದ್ಯ ಈ ಜಿಲ್ಲೆಯಲ್ಲಿ ಒಟ್ಟು 12,719 ಗೃಹಲಕ್ಷ್ಮಿಯರ ಹೆಸರು ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ.
