ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದುಃಖ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮೃತ ಹರ್ಷನ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
Advertisement
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇದೇ ಭಾನುವಾರದಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗದ ಹರ್ಷನ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ನಾನು ಹಾಗೂ ಯಡಿಯೂರಪ್ಪ ಅವರು ಸರ್ಕಾರದ ಪರವಾಗಿ 25 ಲಕ್ಷ ರೂ. ಪರಿಹಾರದ ಚೆಕ್ ನೀಡುತ್ತೇವೆ ಎಂದರು. ಇದನ್ನೂ ಓದಿ: ಉಕ್ರೇನ್ ವಿರುದ್ಧ ಯುದ್ಧ – ಚರ್ಚೆಯಾಗುತ್ತಿದೆ ಭಾರತದ ಐತಿಹಾಸಿಕ ಕೊಹಿನೂರು ವಜ್ರ
Advertisement
ಅಲ್ಲಾಹು ಅಕ್ಬರ್ ಅಂತ ಕೂಗಿದವರ ಮನೆಗೆ ಕಾಂಗ್ರೆಸ್ ನಾಯಕರ ತಂಡವೇ ಭೇಟಿ ನೀಡಿತ್ತು. ಮಹಾರಾಷ್ಟ್ರದಿಂದಲೂ ಕೆಲವು ನಾಯಕರು ಭೇಟಿ ನೀಡಿ ಆ ಯುವತಿಗೆ ಬಹುಮಾನ ನೀಡಿದರು. ಹಿಂದೂಗಳ ಹತ್ಯೆಯಾದಾಗ ಏಕೆ ನಿಮಗೆ ಭೇಟಿ ನೀಡುವ ನೆನಪು ಆಗಲಿಲ್ಲವಾ? ಕೊಲೆ ಮಾಡಿದ ಮುಸಲ್ಮಾನ್ ಗೂಂಡಾಗಳ ಕೃತ್ಯದ ಬಗ್ಗೆ ಕಾಂಗ್ರೆಸ್ ಇದುವರೆಗೂ ಖಂಡನೆ ವ್ಯಕ್ತಪಡಿಸಿಲ್ಲ ಎಂದು ಟೀಕಿಸಿದರು.
Advertisement
Advertisement
ಯು.ಟಿ.ಖಾದರ್ ನೇತೃತ್ವದಲ್ಲಿ ಎಲ್ಲಾ ಮುಸಲ್ಮಾನ್ ಶಾಸಕರು ಸಭೆ ನಡೆಸಿದ್ದಾರೆ. ಇಂತಹ ಘಟನೆಗೆ ಪಿಎಫ್‌ಐ ಹಾಗು ಎಸ್‌ಡಿಪಿಐ ಸಂಘಟನೆಯೇ ಕಾರಣ. ಸಂಘಟನೆ ವಿರುದ್ದ ಕ್ರಮ ಕೈಗೊಳ್ಳಿ. ಎಸ್‌ಡಿಪಿಐ, ಪಿಎಫ್‌ಐ ಸಂಘಟನೆ ನಿಷೇಧ ಮಾಡಿ ಎಂದು ಸ್ವತಃ ಮುಸಲ್ಮಾನ್ ಶಾಸಕರೇ ಆಗ್ರಹಿಸಿದ್ದಾರೆ. ಆದರೆ ಡಿಕೆಶಿ ಹಾಗೂ ಸಿದ್ದರಾಮಯ್ಯ ಮಾತ್ರ ಆರ್‌ಎಸ್‌ಎಸ್ ಕಾರಣ ಅಂತಿದ್ದಾರೆ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹೆಣ ಬಿದ್ದ ಜಾಗದಲ್ಲಿ ಮತ್ತೊಬ್ಬ ಹೋಗಿ ಹೆಣ ಆಗಲು ಯಾರೂ ತಯಾರಿಲ್ಲ: ಶಿವರಾಮ್ ಹೆಬ್ಬಾರ್