ಬೆಂಗಳೂರು: ಚಿಲುಮೆ ಡೇಟಾ (Chilume) ಅಕ್ರಮ ಪ್ರಕರಣದಲ್ಲಿ ಆರೋಪಿಗಳಾಗಿರುವ ಇಬ್ಬರು ಐಎಎಸ್ ಅಧಿಕಾರಿಗಳ (IAS Officers) ಅಮಾನತು ಕ್ರಮವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದು, ಇಬ್ಬರಿಗೂ ಸ್ಥಳ ನಿಯೋಜನೆ ಮಾಡಿದೆ.
ಪ್ರಕರಣದಲ್ಲಿ ಐಎಎಸ್ ಅಧಿಕಾರಿಗಳಾದ ಶ್ರೀನಿವಾಸ್ ಮತ್ತು ರಂಗಪ್ಪ ಅವರ ಹೆಸರು ಕೇಳಿಬಂದಿತ್ತು. ಇಬ್ಬರ ವಿಚಾರಣೆಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದರು. ಆಗ ಸರ್ಕಾರ ಸೇವೆಯಿಂದ ಅಮಾನತು ಮಾಡಿತ್ತು. ಇದನ್ನೂ ಓದಿ: ಫೆಬ್ರವರಿಯಲ್ಲಿ ಬಜೆಟ್ ಮಂಡನೆ: ಬೊಮ್ಮಾಯಿ
ಬಳಿಕ ಸರ್ಕಾರದ ಕ್ರಮವನ್ನು ಇಬ್ಬರೂ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು. ಇದೀಗ ನ್ಯಾಯಾಲಯ ಇಬ್ಬರಿಗೂ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇಬ್ಬರನ್ನು ಸೇವೆಗೆ ಹೊಸ ಸ್ಥಾನಗಳಿಗೆ ನಿಯೋಜನೆ ಮಾಡಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ ಆಗಿದ್ದ ಶ್ರೀನಿವಾಸ್ ಅವರನ್ನು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ. ಇನ್ನು ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ರಂಗಪ್ಪ ಅವರನ್ನು ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಷನ್ ಲಿಮಿಟೆಡ್‍ನ ಎಕ್ಸಿಕ್ಯೂಟಿವ್ ನಿರ್ದೇಶಕರನ್ನಾಗಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಖಾಸಗಿ ಬಸ್ ಪಲ್ಟಿ – ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿಗೆ ಗಾಯ