ಬೆಂಗಳೂರು: ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ವಿರುದ್ಧದ ನಾಲ್ಕು ಪ್ರಕರಣಗಳನ್ನು ಹಿಂಪಡೆದಿರುವುದಾಗಿ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
Advertisement
2020ರ ಸೆಪ್ಟೆಂಬರ್ 16ರ ನಂತರ ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ನಾಲ್ಕು ಕೇಸ್‌ಗಳನ್ನು ಹಿಂಪಡೆದಿರುವುದಾಗಿ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಸಂಸದ ಪ್ರತಾಪಸಿಂಹ ವಿರುದ್ಧದ ಒಂದು ಕೇಸ್, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿರುದ್ಧದ ಮೂರು ಪ್ರಕರಣಗಳನ್ನು ವಾಪಸ್ ಪಡೆದಿರುವುದಾಗಿ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ನೀರು ಕುಡಿಯೋಕೆ ಹೊರಟ ಅಶೋಕ್ ಕಾಲೆಳೆದ ಸಿದ್ದರಾಮಯ್ಯ, ಯಡಿಯೂರಪ್ಪ..!
Advertisement
ಇದಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ಕೃಷ್ಣಕುಮಾರ್ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್ ಸಮ್ಮತಿಯಿಲ್ಲದೇ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಹೀಗಿದ್ದೂ ಹೇಗೆ ವಾಪಸ್ ಪಡೆದಿರಿ ಎಂದು ಪ್ರಶ್ನಿಸಿದೆ.
Advertisement
Advertisement
ವಾಪಸ್ ಪಡೆದ ಪ್ರಕರಣಗಳ ಸಂಬಂಧ ವರದಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈ ಮಧ್ಯೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಅಂಕೋಲಾ ಕೋರ್ಟ್‌ಗೆ ಹಾಜರಾದ ಸಚಿವ ಆನಂದ ಸಿಂಗ್, ಮಾಜಿ ಸಚಿವ ಜನಾರ್ಧನ ರೆಡ್ಡಿ, ಶಾಸಕ ನಾಗೇಂದ್ರ ಸೇರಿ ಏಳು ಜನ ಜಾಮೀನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸಿಎಂ ಆಗಿದ್ದಕ್ಕೆ ಬಿಜೆಪಿ ನಾಯಕರ ಕಾಲೆಳೆದ ಸಿದ್ದರಾಮಯ್ಯ