ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರಿಯ ತನಿಖಾ ದಳ (CBI) ಮುಕ್ತ ತನಿಖೆಗೆ ಇದ್ದ ಅಧಿಸೂಚನೆ ಹಿಂಪಡೆಯಲು ಕ್ಯಾಬಿನೆಟ್ (Cabinet) ನಿರ್ಧರಿಸಿದೆ. ನಗರದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 28 ವಿಷಯಗಳನ್ನ ಪರಿಶೀಲಿಸಲಾಯಿತು. ಎರಡು ವಿಷಯ ಹೊರತು ಪಡಿಸಿ ಉಳಿದಿದ್ದೆಲ್ಲಾ ವಿಷಯಗಳ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.
ಈ ಪೈಕಿ ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆ ಹಿಂಪಡೆಯಲು ಕ್ಯಾಬಿನೆಟ್ ನಿರ್ಧಾರ ತೆಗೆದುಕೊಡಿದೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐಗೆ ಮುಕ್ತ ಅವಕಾಶವಿತ್ತು. ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲೀಶ್‌ಮೆಂಟ್ ಆಕ್ಟ್ (Delhi Special Police Establishment Act), 1946 ಅಡಿ ಅವಕಾಶ ಇತ್ತು. ಈಗ ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ಹಿಂಪಡೆಯಲು ತೀರ್ಮಾನಿಸಿದೆ.
Advertisement
Advertisement
ಕ್ಯಾಬಿನೆಟ್ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ರಾಜ್ಯ ಕಾನೂನು ಸಚಿವ ಹೆಚ್.ಕೆ ಪಾಟೀಲ್ (HK Patil), ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧರಿಸಿದೆ ಎಂದು ತಿಳಿಸಿದರು.
Advertisement
ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಯಾರಾದರೂ ದೂರು ನೀಡಿದರೆ ಮುಕ್ತವಾಗಿ ಸಿಬಿಐ ತನಿಖೆ ನಡೆಸಬಹುದಿತ್ತು. ಅದಕ್ಕೆ ಕರ್ನಾಟಕ ಸರ್ಕಾರವೇ ಅವಕಾಶ ಮಾಡಿಕೊಟ್ಟಿತ್ತು. ಈಗ ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆ ಹಿಂಪಡೆಯಲು ಕ್ಯಾಬಿನೆಟ್ ನಿರ್ಧಾರ ಮಾಡಿದೆ ಎಂದು ತಿಳಿಸಿದ್ದಾರೆ.
Advertisement
ಏನೇ ವಿಷಯಗಳಿದ್ದರೂ ಕ್ಯಾಬಿನೆಟ್ ಗಮನಕ್ಕೆ ತರಬೇಕು:
ರಾಜ್ಯಪಾಲರು ಮೇಲಿಂದ ಮೇಲೆ ಅಸಹನೆ ವರ್ತನೆ ಮೇಲೆ ಪತ್ರ ಬರೆಯುತ್ತಿದ್ದಾರೆ. ತಕ್ಷಣ ಮಾಹಿತಿ ಕೊಡಿ ಇಂದೇ ಕೊಡಿ ಅಂತ ಪತ್ರ ಬರೆಯುತ್ತಿದ್ದಾರೆ. ಯಾವುದೆ ಮಾಹಿತಿಯನ್ನು ಯಾವುದೇ ಕಾರ್ಯದರ್ಶಿ ಆಗಲಿ, ಮುಖ್ಯ ಕಾರ್ಯದರ್ಶಿಯಾಗಲಿ ರಾಜ್ಯಪಾಲರಿಗೆ ಕಳುಹಿಸುವ ಸಂದರ್ಭದಲ್ಲಿ ಕ್ಯಾಬಿನೆಟ್ ಗಮನಕ್ಕೆ ತಂದು ಅದರ ನಿರ್ಣಯದಂತೆ ಮುಂದುವರಿಯಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇವೆ. ಇವತ್ತು ಈ ತೀರ್ಮಾನ ಕೈಗೊಂಡಿದ್ದೇವೆ. ಮುಂದೆ ಯಾವುದೇ ವಿಚಾರ ಇದ್ದರೂ ಮುಖ್ಯ ಕಾರ್ಯದರ್ಶಿ ಕ್ಯಾಬಿನೆಟ್ ಗಮನಕ್ಕೆ ತರುತ್ತಾರೆ ಎಂದು ತಿಳಿಸಿದ್ದಾರೆ.