ಬೆಂಗಳೂರು: ಪ್ರತ್ಯೇಕವಾಗಿ ಮುಸ್ಲಿಂ ಕಾಲೇಜುಗಳನ್ನು (Muslims College) ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವ ಬಿ.ಸಿ ನಾಗೇಶ್ (BC Nagesh) ಸ್ಪಷ್ಟಪಡಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯೊಂದಿಗೆ (Public TV) ಮಾತನಾಡಿರುವ ಅವರು, ಸರ್ಕಾರದಿಂದಲೇ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ ಅನ್ನೋ ವಿಚಾರ ಕೇಳಿಬರುತ್ತಿದೆ. ಇಂತಹ ಯಾವುದೇ ಪ್ರಸ್ತಾವನೆಯನ್ನು ಶಿಕ್ಷಣ ಇಲಾಖೆ (Education Department) ಸಲ್ಲಿಸಿಲ್ಲ. ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡುವ ಉದ್ದೇಶ ಸರ್ಕಾರಕ್ಕೂ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಬಲಿದಾನವಾದ್ರೂ ಸರಿ ಮುಸ್ಲಿಂ ಕಾಲೇಜು ಸ್ಥಾಪನೆಗೆ ನಾನು ಬಿಡೋದಿಲ್ಲ: ಮುತಾಲಿಕ್
Advertisement
Advertisement
ಏನಿದು ಪ್ರತ್ಯೇಕ ಮುಸ್ಲಿಂ ಕಾಲೇಜು ವಿವಾದ?
ಉಡುಪಿಯಲ್ಲಿ ಹಿಜಬ್ (Hijab) ವಿವಾದ ಉದ್ಭವಿಸಿದ ನಂತರ ತರಗತಿಗಳಲ್ಲಿ ಹಿಜಬ್ ಧರಿಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತ್ತು. ಇದರಿಂದಾಗಿ ಬಹುತೇಕ ಮುಸ್ಲಿಂ ಸಂಘ ಸಂಸ್ಥೆಗಳು, ಸರ್ಕಾರದ ವಿರುದ್ಧ ತಿರುಗಿಬಿದ್ದು ಹೆಣ್ಣುಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದ್ದರು. ಹೀಗಾಗಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ (Muslim Students) ಸರ್ಕಾರವೇ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲು ಮುಂದಾಗಿದೆ ಮೂಲಗಳು ತಿಳಿಸಿದ್ದವು. ಇದನ್ನೂ ಓದಿ: ಕಾಂಗ್ರೆಸ್ ನಾಯಕನನ್ನು ಸೋಲಿಸಲು ಹರಕೆ- ಮೊಣಕಾಲಿನಲ್ಲೇ ತಿರುಪತಿ ಬೆಟ್ಟ ಹತ್ತಿದ BJP ಮುಖಂಡ
Advertisement
ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಸರ್ಕಾರ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ಮುಂದಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮುಂದಿನ ತಿಂಗಳು ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸುವ ನಿರೀಕ್ಷೆಯಿದೆ. 3 ತಿಂಗಳ ಹಿಂದೆಯೇ ವಕ್ಫ್ ಬೋರ್ಡ್‌ನಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆಯೇ ಅನುಮೋದನೆ ದೊರೆತು ಪ್ರತಿ ಕಾಲೇಜಿಗೆ 2.50 ಕೋಟಿ ರೂ. ಅನುದಾನವನ್ನೂ ಮೀಸಲಿಟ್ಟಿದೆ. ರಾಜ್ಯ ಸರ್ಕಾರ ವಕ್ಫ್ ಬೋರ್ಡ್‌ಗೆ ನೀಡುವ ಅನುದಾನದಲ್ಲೇ ಈ ವೆಚ್ಚವನ್ನು ಭರಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿದ್ದವು. ಇದಕ್ಕೆ ಹಿಂದೂ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.