ಕ್ರೇಜಿಸ್ಟಾರ್ ರವಿಚಂದ್ರನ್ ಕಲಾವಿದನಾಗಿ ಸಾಕಷ್ಟು ವರ್ಷಗಳಿಂದ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಹಲವಾರು ಪಾತ್ರಗಳಿಂದ ಅಭಿಮಾನಿಗಳನ್ನು ರಂಜಿಸಿದ್ದಾರೆ. ನಟ ರವಿಚಂದ್ರನ್ ಅವರ ಸಾಧನೆಯನ್ನು ಗುರುತಿಸಿ ಇಂದು ಬೆಂಗಳೂರು ವಿಶ್ವವಿದ್ಯಾನಿಲಯದ ಚೊಚ್ಚಲ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.
Advertisement
ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನಟ ರವಿಚಂದ್ರನ್ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು. ಇನ್ನು 85ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ನಟ ರವಿಚಂದ್ರನ್ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನ ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ. ಇದನ್ನು ಓದಿ:ಕೆಜಿಎಫ್-2 ರಿಲೀಸ್ ಫಿವರ್: ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಬುಕ್ ಮಾಡಿದ ಯಶ್ ಮಹಿಳಾ ಫ್ಯಾನ್ಸ್
Advertisement
Advertisement
ಇನ್ನು ಕಾರ್ಯಕ್ರಮದಲ್ಲಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿ. ರವಿಚಂದ್ರನ್, ಸಮಾಜ ಸೇವೆಗಾಗಿ ಎಂ. ಆರ್ ಜೈ ಶಂಕರ್, ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಸತ್ಯನಾರಾಯಣ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಇನ್ನು ಈ ವೇಳೆ ಕಾರ್ಯಕ್ರಮದಲ್ಲಿ ನಟ ರವಿಚಂದ್ರನ್ ಪತ್ನಿ ಸುಮತಿ, ಮಕ್ಕಳಾದ ವಿಕ್ರಮ್, ಮನೋರಂಜನ್, ಗೀತಾಂಜಲಿ, ಅಳಿಯ ಅಜಯ್ ಭಾಗಿಯಾಗಿದ್ದರು. ಈ ಸುದ್ದಿ ಕೇಳಿ ಕ್ರೇಜಿಸ್ಟಾರ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.