ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವೀಕ್ಷಿಸಿದ್ದಾರೆ.
ಬುಧವಾರದಿಂದ ಶಿವಮೊಗ್ಗ ಜಿಲ್ಲೆ ಪ್ರವಾಸದಲ್ಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಜೋಗ ಜಲಪಾತ ವೀಕ್ಷಣೆ ಮಾಡಿದರು. ಈ ವೇಳೆ ಜೋಗ ಜಲಪಾತದ ಎದುರು ಪೋಟೋವನ್ನು ತೆಗೆಸಿಕೊಂಡಿದ್ದಾರೆ. ಇದನ್ನೂ ಓದಿ: ಅಮೆರಿಕ, ಭಾರತದ ತಂತ್ರಕ್ಕೆ ಒಪೆಕ್ ಗರಂ – ಮತ್ತೆ ಏರಿಕೆ ಆಗುತ್ತಾ ತೈಲ ಬೆಲೆ?
ನಿನ್ನೆ ಮಧ್ಯಾಹ್ನ ರಸ್ತೆ ಮಾರ್ಗವಾಗಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ರಾಜ್ಯಪಾಲರು ಮಾಜಿ ಸಿಎಂ ಯಡಿಯೂರಪ್ಪ ಒಡೆತನದ ಪಿಇಎಸ್ ಕಾಲೇಜಿನಲ್ಲಿ ಆಯೋಜನೆಗೊಂಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಸೆಮಿನಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾಯಕ್ರಮ ಉದ್ಘಾಟಿಸಿದ ರಾಜ್ಯಪಾಲರು ರಾತ್ರಿ ಜೋಗ ಜಲಪಾತದ ಬಳಿ ವಾಸ್ತವ್ಯ ಹೂಡಿದ್ದರು. ಇದನ್ನೂ ಓದಿ: ಸ್ವೀಡನ್ ಪ್ರಥಮ ಮಹಿಳಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ಒಂದೇ ದಿನಕ್ಕೆ ರಾಜೀನಾಮೆ ನೀಡಿದ ಆ್ಯಂಡರ್ಸನ್