ಬೆಂಗಳೂರು: ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅಂಕಿತ ಹಾಕಿದ್ದಾರೆ.
ಕರ್ನಾಟಕ ಸಾರ್ವಜನಿಕ ಪರೀಕ್ಷಾ (ಭ್ರಷ್ಟಾಚಾರ) ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ ಕಾನೂನು ವಿಧೇಯಕಕ್ಕೆ ರಾಜ್ಯಪಾಲರು ಸೋಮವಾರ ಸಹಿ ಹಾಕಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ದಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು – ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಟ್ವಿಸ್ಟ್
- Advertisement
ಕೆಲವು ಸ್ಪಷ್ಟನೆ ಕೇಳಿ ವಿಧೇಯಕಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದರು. ಸರ್ಕಾರದ ಸ್ಪಷ್ಟನೆ ನಂತರ ವಿಧೇಯಕಗಳಿಗೆ ಅಂಕಿತ ಸಿಕ್ಕಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement
11 ವಿಧೇಯಕಗಳ ಪೈಕಿ 3 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇನ್ನೂ 8 ವಿಧೇಯಕಗಳಿಗೆ ರಾಜ್ಯಪಾಲರ ಅನುಮೋದನೆ ಪಡೆಯುವುದು ಬಾಕಿ ಇದೆ. ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಅಸ್ತು