ಬೆಂಗಳೂರು: ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೊತೆಗೆ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ನಮ್ಮಲ್ಲಿರುವ ಜ್ಞಾನವನ್ನು ಯಾರೂ ಕದಿಯಲು ಸಾಧ್ಯವಿಲ್ಲ. ಜ್ಞಾನ ಪಡೆದುಕೊಂಡರೆ ಸಾಧನೆಗೆ ದಾರಿ ಸುಲಭವಾಗಲಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದಲ್ಲಿ ಸಿಎಂಆರ್ ಸಮೂಹ ಸಂಸ್ಥೆಗಳ ಸಭಾಂಗಣದಲ್ಲಿ ನಡೆದ ಸಿಎಂಆರ್ ವಿಶ್ವವಿದ್ಯಾಲಯದ (CMR University) 7ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಡಿ.ರೂಪಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರೋಹಿಣಿ
Advertisement
Advertisement
ಜೀವನದ ಯಶಸ್ಸಿನಲ್ಲಿ ಶಿಕ್ಷಣವು ಮಹತ್ತರವಾದ ಕೊಡುಗೆಯನ್ನು ಹೊಂದಿದೆ. ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ. ಒಬ್ಬ ವ್ಯಕ್ತಿಯು ಶಿಕ್ಷಣ ಪಡೆದಾಗ ಮಾತ್ರ ಅವನ ಅಭಿವೃದ್ಧಿಯಾಗುತ್ತದೆ. ಶಿಕ್ಷಣವು ನಮಗೆ ತಾಂತ್ರಿಕ ಮತ್ತು ಹೆಚ್ಚು ನುರಿತ ಜ್ಞಾನವನ್ನು ನೀಡುತ್ತದೆ. ಆಲೋಚನೆಗಳನ್ನು ವ್ಯಕ್ತಪಡಿಸುವ ಸಾಮರ್ಥ್ಯವನ್ನು ನೀಡುತ್ತದೆ. ಶಿಕ್ಷಣವು ಕೌಶಲ್ಯಗಳನ್ನು ಹೆಚ್ಚಿಸುತ್ತದೆ. ನಾವು ಆಸಕ್ತಿ ಹೊಂದಿರುವ ಕ್ಷೇತ್ರದಲ್ಲಿ ಕೌಶಲ್ಯದಿಂದ ಉತ್ತಮ ಯಶಸ್ಸನ್ನು ಸಾಧಿಸಬಹುದು ಎಂದರು.
Advertisement
ನಮ್ಮ ಹಳೆಯ ಶಿಕ್ಷಣ ವ್ಯವಸ್ಥೆಯು ಅತ್ಯಂತ ಶ್ರೀಮಂತ ಮತ್ತು ವಿಶಾಲವಾದದ್ದು ಎಂದು ನಮಗೆಲ್ಲರಿಗೂ ತಿಳಿದಿದೆ. ಅದಕ್ಕಾಗಿಯೇ ನಮ್ಮನ್ನು ವಿಶ್ವಗುರು ಎಂದು ಪರಿಗಣಿಸಲಾಗಿದೆ. ನಮ್ಮ ಆರ್ಥಿಕತೆಯು ನಮ್ಮ ದೇಶವನ್ನು ಚಿನ್ನದ ಹಕ್ಕಿ ಎಂದು ಕರೆಯುವಷ್ಟು ಪ್ರಬಲವಾಗಿತ್ತು. ಇದನ್ನು ಮತ್ತೊಮ್ಮೆ ಸಾಧಿಸಲು, ನಾವು ನಮ್ಮ ಯುವ ಕೌಶಲ್ಯ, ಪ್ರತಿಭೆ ಮತ್ತು ಶಕ್ತಿಯನ್ನು ಪ್ರದರ್ಶಿಸುವ ಮೂಲಕ ಸಂಘಟಿತ ಪ್ರಯತ್ನಗಳನ್ನು ಮಾಡಬೇಕಾಗಿದೆ. ಇದರಲ್ಲಿ ಯುವಕರ ಪಾತ್ರವು ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಇದು ನನ್ನ ಕೊನೆ ಭಾಷಣ.. ಮುಂದಿನ ಅಧಿವೇಶನದಲ್ಲಿ ಸದನಕ್ಕೆ ಬರಲ್ಲ – ಗದ್ಗದಿತರಾದ ಬಿಎಸ್‌ವೈ
Advertisement
ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯವು ಬಹಳ ಪುರಾತನವಾಗಿದೆ. ಪ್ರಾಚೀನ ಕಾಲದಿಂದಲೂ “ವಸುದೈವ ಕುಟುಂಬಕಂ” ತತ್ವಶಾಸ್ತ್ರ ಮತ್ತು ಧ್ಯಾನದ ಮೇಲೆ ಕೇಂದ್ರೀಕೃತವಾಗಿದೆ. “ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯ” ಎಂಬ ಮನೋಭಾವದಿಂದ ಪ್ರೇರಿತವಾಗಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ನಮ್ಮ ಇಂದಿನ ಮತ್ತು ಮುಂದಿನ ಪೀಳಿಗೆಯ ಭವಿಷ್ಯವನ್ನು ಉಜ್ವಲವಾಗಿ ಮತ್ತು ಯಶಸ್ವಿಯಾಗುವಂತೆ ಮಾಡಲಿದೆ. ನವ ಭಾರತ ನಿರ್ಮಾಣದಲ್ಲಿ ಇದರ ಪಾತ್ರ ನಿರ್ಣಾಯಕವಾಗಿರುತ್ತದೆ ಎಂದು ಹೇಳಿದರು.
ಈ ಶಿಕ್ಷಣ ನೀತಿಯ ಗುರಿಯು ಎಲ್ಲರಿಗೂ ಉನ್ನತ ಶಿಕ್ಷಣವನ್ನು ಒದಗಿಸುವುದು, ಮಾತೃಭಾಷೆಯಲ್ಲಿ ಅಧ್ಯಯನದ ಜೊತೆಗೆ ನೆಚ್ಚಿನ ವಿಷಯವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ನೀಡುತ್ತದೆ. ಭಾರತದ ಸಾಂಸ್ಕೃತಿಕ ವೈಭವವನ್ನು ಮರುಸ್ಥಾಪಿಸುವಲ್ಲಿ ಕೊಡುಗೆಯನ್ನು ನೀಡಿ. ಭಾರತವನ್ನು ಜಾಗತಿಕ ಜ್ಞಾನ ಶಕ್ತಿಯನ್ನಾಗಿ ಮಾಡಲು ಈ ಶಿಕ್ಷಣ ನೀತಿಯನ್ನು ಯಶಸ್ವಿಗೊಳಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿದ್ಯಾರ್ಥಿಗಳು ಶಿಕ್ಷಣ ಮತ್ತು ಕ್ರೀಡೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿಬೇಕು. ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢಗೊಳಿಸುತ್ತದೆ ಎಂದು ಸಲಹೆ ನೀಡಿದ ಅವರು, ಪರಿಸರ ಸಂರಕ್ಷಣೆಯ ಹೆಚ್ಚಿನ ಅವಶ್ಯಕತೆಯಿದೆ. ಪರಿಸರ ಸಂರಕ್ಷಣೆಗೆ ವಿದ್ಯಾರ್ಥಿಗಳು ಕೈಜೋಡಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಭರವಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಮಾತ್ರವಲ್ಲ, ರಾಷ್ಟ್ರೀಯ ಅಧ್ಯಕ್ಷಗೂ ರಾಜಕೀಯ ಜ್ಞಾನವಿಲ್ಲ: ಸಿದ್ದರಾಮಯ್ಯ
ದಕ್ಷಿಣ ಕೊರಿಯಾದ ಕೊರಿಯಾ ನ್ಯಾಷನಲ್ ಸ್ಪೋರ್ಟ್ಸ್ ಯೂನಿವರ್ಸಿಟಿ ಅಧ್ಯಕ್ಷ ಪ್ರೊಫೆಸರ್ ಯಾಂಗ್-ಕ್ಯು ಆನಾ ಅವರಿಗೆ ಸಿಎಂಆರ್ ವಿಶ್ವವಿದ್ಯಾನಿಲಯವು ಗೌರವ ಪದವಿಯನ್ನು ನೀಡಿ ಗೌರವಿಸಿತು. ಹರಿ ಕೆ ಮರಾರ್, ಎಂಡಿ ಮತ್ತು ಸಿಇಒ, ಬೆಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್, ಸಿಎಂಆರ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ.ಸಿ.ರಾಮಮೂರ್ತಿ, ಡಾ.ಸವಿತಾ ರಾಮಮೂರ್ತಿ, ಡಾ. ತ್ರಿಷ್ಠ ರಾಮಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k