ಬೆಂಗಳೂರು: ಲತಾ ಮಂಗೇಶ್ಕರ್ ನಿಧನರಾದ ಹಿನ್ನೆಲೆಯಲ್ಲಿ ಗೌರವಾರ್ಥ ರಾಜ್ಯಾದ್ಯಂತ ಎರಡು ದಿನ ಶೋಕ ಆಚರಿಸಲಾಗುವುದು ಎಂದು ಕರ್ನಾಟಕ ಸರ್ಕಾರ ತಿಳಿಸಿದೆ.
ಭಾನುವಾರ ಮತ್ತು ಸೋಮವಾರ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ಅರ್ಧಮಟ್ಟಕ್ಕೆ ಹಾರಿಸಲಾಗುವುದು ಎಂದು ಸರ್ಕಾರದ ತನ್ನ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರನ್ನು ಸಚಿನ್ ತೆಂಡೂಲ್ಕರ್ ಏನೆಂದು ಕರೆಯುತ್ತಿದ್ದರು ಗೊತ್ತಾ?
Advertisement
Advertisement
ಈ ಜಗತ್ತಿನಲ್ಲಿ ಎಲ್ಲಿಯತನಕ ಸಂಗೀತ ಇರುತ್ತದೆಯೋ, ಎಲ್ಲಿಯವರೆಗೂ ಹಾಡುಗಾರಿಕೆ ಇರುತ್ತದೆಯೋ, ಅಲ್ಲಿಯವರೆಗೂ ಗಾನ ವಿದುಷಿ ಲತಾ ಮಂಗೇಶ್ಕರ್ ಅವರು ಪ್ರತಿಯೊಬ್ಬರ ಮನದಲ್ಲಿಯೂ ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಓಂ ಶಾಂತಿಃ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.