ಬೆಂಗಳೂರು: ಡೆಂಗ್ಯೂ (Dengue) ಟೆಸ್ಟಿಂಗ್‌ಗೆ ಹೆಚ್ಚಿನ ಬೆಲೆ ವಿಧಿಸುತ್ತಿದ್ದ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಡಿವಾಣ ಹಾಕಿದ್ದಾರೆ. 600 ರೂ. ದರ ನಿಗದಿಪಡಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯೂ ಜ್ವರ ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಮನಬಂದಂತೆ ಡೆಂಗ್ಯೂ ಟೆಸ್ಟಿಂಗ್‌ಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದನ್ನೂ ಓದಿ: 6,187 ಡೆಂಗ್ಯೂ ಪ್ರಕರಣ ಪತ್ತೆ – ಬೆಂಗ್ಳೂರಲ್ಲಿ ಮನೆ ಮನೆ ಸಮೀಕ್ಷೆ ನಡೆಸುವಂತೆ ಪಾಲಿಕೆಗೆ ಸೂಚನೆ!
Advertisement
Advertisement
ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗ್ಯೂ ಟೆಸ್ಟಿಂಗ್‌ಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಟೆಸ್ಟಿಂಗ್‌ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್‌ಗಳಿಗೆ ತಲಾ 300 ರೂ. ಗಳನ್ನ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಗ್ಯೂ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ.
Advertisement
Advertisement
ಡೆಂಗ್ಯೂ ನಿಯಂತ್ರಣ ಮುಂಜಾಗೃತಾ ಕ್ರಮಗಳ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ. ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಗ್ಯೂ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗಿ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಕೈಗೊಂಡಿರುವ ಮುಂಜಾಗೃತಾ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಡೆಂಗ್ಯೂಗೆ 13 ವರ್ಷದ ಬಾಲಕಿ ಬಲಿ!