ಬೆಂಗಳೂರು: ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ (Vandita Sharma) ಅವರು ಮೊದಲ ಟಿಕೆಟ್ ಪಡೆದು ಗಮನ ಸೆಳೆದರು.
ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ‘ಶಕ್ತಿ’ಗೆ ಭಾನುವಾರ ಚಾಲನೆ ದೊರೆಯಿತು. ಆಯ್ದ ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಯೋಜನೆಗೆ ಸಿದ್ದರಾಮಯ್ಯ ಅವರು ಅಧಿಕೃತ ಚಾಲನೆ ನೀಡಿದರು. ಇದನ್ನೂ ಓದಿ: ನಮಗೆ ಎಷ್ಟೇ ಕಷ್ಟ ಬರಲಿ 5 ಗ್ಯಾರಂಟಿ ಈಡೇರಿಸುತ್ತೇವೆ: ಸಿದ್ದರಾಮಯ್ಯ ಶಪಥ
Advertisement
Advertisement
ಯೋಜನೆ ಭಾಗವಾಗಿ ಸಿದ್ದರಾಮಯ್ಯ ಅವರಿಂದ ವಂದಿತಾ ಶರ್ಮಾ ಅವರು ಮೊದಲ ಟಿಕೆಟ್ ಪಡೆದರು. ಟಿಕೆಟ್ ಪ್ರದರ್ಶಿಸಿ ಖುಷಿ ವ್ಯಕ್ತಪಡಿಸಿದರು. ನಂತರ ಎರಡನೇ ಟಿಕೆಟ್‌ನ್ನು ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಪಡೆದುಕೊಂಡರು.
Advertisement
Advertisement
ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಯನ್ನು ಉದ್ಘಾಟಿಸಿದರು. ಮಧ್ಯಾಹ್ನ 1 ಗಂಟೆಯ ನಂತರ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಕಲ್ಪಿಸಲಾಯಿತು. 18,609 ಬಸ್‌ಗಳು ಉಚಿತ ಪ್ರಯಾಣಕ್ಕೆ ಲಭ್ಯ ಇವೆ. 41.80 ಲಕ್ಷ ಮಹಿಳೆಯರು ಈ ಸೌಲಭ್ಯದ ಫಲಾನುಭವಿಗಳು ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ‘ಶಕ್ತಿ’ ಯೋಜನೆ ಹೆಸರಿನ ಹಿಂದಿನ ಸೀಕ್ರೆಟ್ ರಿವೀಲ್ ಮಾಡಿದ ಸಿಎಂ!