ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸದಿರುವ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಈ ಸಂಬಂಧ ಸಿಡಬ್ಲ್ಯೂಆರ್‌ಸಿಗೆ (CWRC) ಪತ್ರ ಬರೆಯಲು ಸರ್ಕಾರ ನಿರ್ಧರಿಸಿದೆ.
ತಮಿಳುನಾಡಿಗೆ (TamilNadu) ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾವೇರಿ ನೀರು ಹರಿಸುವ ಸಂಬಂಧ ವಿಶೇಷ ಸರ್ವಪಕ್ಷ ಸಭೆ ನಡೆಸಲಾಯಿತು. ಇದನ್ನೂ ಓದಿ: ತಮಿಳುನಾಡಿಗೆ ನೀರು – ಇಂದು ಸರ್ವಪಕ್ಷ ಸಭೆ ಕರೆದ ಸರ್ಕಾರ
Advertisement
Advertisement
ಸಭೆ ಆರಂಭದಲ್ಲಿ ಸಿಡಬ್ಲ್ಯೂಆರ್‌ಸಿ ಆದೇಶ ಪಾಲನೆ ಮಾಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಆದೇಶ ಪಾಲನೆ ಮಾಡದಿದ್ದರೆ ಎದುರಾಗುವ ಕಾನೂನು ತೊಡಕುಗಳ ಬಗ್ಗೆಯೂ ಆರಂಭದಲ್ಲಿ ಚರ್ಚಿಸಲಾಯಿತು. ನಂತರ ವಿಪಕ್ಷ ನಾಯಕರ ಸಲಹೆಗಳನ್ನು ಸಿಎಂ, ಡಿಸಿಎಂ ಪಡೆದರು.
Advertisement
ಕಾವೇರಿ ನೀರು ಹರಿಸದಂತೆ ಸಭೆಯಲ್ಲಿ ಅಭಿಪ್ರಾಯ ಕೇಳಿಬಂತು. ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ಬೇಡ. ಸಿಡಬ್ಲ್ಯೂಆರ್‌ಸಿ ಆದೇಶ ಪಾಲಿಸಬೇಡಿ. ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಂತೆ ಬಿಜೆಪಿ ನಾಯಕರು ಸರ್ಕಾರಕ್ಕೆ ಸಲಹೆ ನೀಡಿದರು. ಇದನ್ನೂ ಓದಿ: ಸರ್ಕಾರ ನೀರು ಬಿಡಲ್ಲವೆಂದು ಗಟ್ಟಿಯಾಗಿ ನಿಂತ್ರೆ ನಾವೂ ಜೊತೆ ನಿಲ್ಲುತ್ತೇವೆ: ಬೊಮ್ಮಾಯಿ
Advertisement
ಇದೇ 21 ರಂದು ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ನದಿ ವಿವಾದ ವಿಚಾರಣೆಗೆ ಬರಲಿದೆ. ತಮಿಳುನಾಡಿಗೆ ನೀರು ಹರಿಸದಿರುವ ನಿರ್ಣಯ ತೆಗೆದುಕೊಂಡರೆ, ಸರ್ಕಾರದ ಬೆನ್ನಿಗೆ ನಿಲ್ಲುವುದಾಗಿ ಬಿಜೆಪಿ ನಾಯಕರು ತಿಳಿಸಿದರು. ಗಂಭೀರ ಚರ್ಚೆಯ ನಂತರ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡಿಗೆ ನೀರು ಬಿಡದಿರಲು ನಿರ್ಣಯ ಕೈಗೊಳ್ಳಲಾಯಿತು. ಸರ್ವ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ನೀರು ಹರಿಸದಿರುವ ನಿರ್ಧರಿಸಲಾಯಿತು.
ಸಭೆಯಲ್ಲಿ ಡಿಸಿಎಂ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಣ್ಣ ನೀರಾವರಿ ಸಚಿವ ಎಸ್.ಎನ್. ಬೋಸರಾಜು, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಸಚಿವರಾದ ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಮಂಕಾಳ ವೈದ್ಯ, ರಾಮಲಿಂಗಾರೆಡ್ಡಿ, ಸಂಸದರಾದ ಪ್ರತಾಪಸಿಂಹ, ಸುಮಲತಾ ಅಂಬರೀಶ್, ಪಿ.ಸಿ. ಮೋಹನ್, ಲೇಹರ್ ಸಿಂಗ್, ಶಾಸಕರಾದ ಜನಾರ್ದನ ರೆಡ್ಡಿ, ದರ್ಶನ್ ಪುಟ್ಟಣ್ಣಯ್ಯ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಸಭೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಅರ್ಧ ಬೆಂಗಳೂರಿಗೆ ಇಂದು ನೀರಿನ ಪೂರೈಕೆಯಲ್ಲಿ ವ್ಯತ್ಯಯ
ಮಾಜಿ ಸಿಎಂಗಳಾದ ಹೆಚ್.ಡಿ. ದೇವೇಗೌಡ, ಎಸ್.ಎಂ. ಕೃಷ್ಣ, ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಸಂಸದ ನಳಿನ್ ಕುಮಾರ್ ಕಟೀಲ್ ಗೈರಾಗಿದ್ದರು.
Web Stories