ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಹಂಪಿ ಉತ್ಸವ (Hampi Utsava) ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ (Zameer Ahmed) ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಇದನ್ನೂ ಓದಿ: ಸಿದ್ದರಾಮಯ್ಯ ಮೊದಲ ಗೂಟದ ಕಾರ್ ಕಂಡಿದ್ದು ಬಿಜೆಪಿಯಿಂದ: ಈಶ್ವರಪ್ಪ
ರಾಜ್ಯದಲ್ಲಿ ವಿಜಯನಗರ-ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ ನಡೆಸುವುದು ಕಷ್ಟ. ಫೆಬ್ರವರಿ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಉತ್ಸವ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಈ ಮುಂಚೆ ನವೆಂಬರ್‌ನಲ್ಲಿ ಉತ್ಸವ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಬರ ಪರಿಸ್ಥಿತಿಯಿಂದಾಗಿ ಮುಖ್ಯಮಂತ್ರಿ ಅವರು ಫೆಬ್ರವರಿಯಲ್ಲಿ ನಡೆಸಿ ಎಂದು ಸಲಹೆ ನೀಡಿದ್ದು, ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾವೇರಿ ನೀರು ತಮಿಳುನಾಡಿಗೆ ಬಿಟ್ಟು ರಾಜ್ಯದ ಜನರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ: ಕುಮಾರಸ್ವಾಮಿ
ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಗೋವಿಂದರಾಜು, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಮುಖ್ಯಮಂತ್ರಿ ಅವರ ಜಂಟಿ ಕಾರ್ಯದರ್ಶಿ ಜಯರಾಮ್, ಜಿಲ್ಲಾಧಿಕಾರಿ ದಿವಾಕರ್ ಸಭೆಯಲ್ಲಿ ಉಪಸ್ಥಿತರಿದ್ದರು.
Web Stories