ನಾಳೆ ಸರ್ಕಾರಿ ರಜೆ ಘೋಷಣೆ – 3 ದಿನ ಶೋಕಾಚರಣೆ

Public TV
1 Min Read
sm krishna

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ (SM Krishna) ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಸರ್ಕಾರಿ ರಜೆಯನ್ನು (Government Holidays) ಘೋಷಣೆ ಮಾಡಲಾಗಿದೆ. ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.

ಬೆಳಗಾವಿಯಿಂದ ಬೆಂಗಳೂರಿನ ಸದಾಶಿವ ನಗರಕ್ಕೆ ಆಗಮಿಸಿ ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಮಾಧ್ಯಮಗಳ ಜೊತೆ ಮಾತನಾಡಿ ಸರ್ಕಾರಿ ರಜೆ ಘೋಷಣೆ ಮಾಡಿದ ವಿಚಾರವನ್ನು ತಿಳಿಸಿದರು.  ಇದನ್ನೂ ಓದಿ: ರಾಜಕಾರಣದ ಮೊದಲು ಗುರು, ಮಗನ ರೀತಿ ನೋಡುತ್ತಿದ್ದರು : ಎಸ್‌ಎಂಕೆ ನೆನೆದು ಡಿಕೆಶಿ ಕಣ್ಣೀರು

ನಾಳೆ ಬೆಳಗ್ಗೆ 8 ಗಂಟೆಯವರೆಗೆ ಬೆಂಗಳೂರಿನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ನಂತರ ಮದ್ದೂರಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಅಲ್ಲಿ ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಇಡಲಾಗುತ್ತದೆ. ಮಂಡ್ಯ ಮೈಸೂರು ಭಾಗದ ಕೃಷ್ಣ ಅವರ ಅಭಿಮಾನಿಗಳು ಮದ್ದೂರಿಗೆ ಬರಬಹುದು.  ಇದನ್ನೂ ಓದಿ: ಅಮೆರಿಕ ಮಾಜಿ ಅಧ್ಯಕ್ಷ ಜಾನ್‌ ಎಫ್‌ ಕೆನಡಿ ಪ್ರೇರಣೆಯಿಂದ ರಾಜಕೀಯ ಸೇರಿದ್ದ ಕೃಷ್ಣ

ಮಧ್ಯಾಹ್ನ 3 ಗಂಟೆಯ ನಂತರ ಮೃತದೇಹವನ್ನು ಸ್ವಗ್ರಾಮ ಸೋಮನಹಳ್ಳಿಗೆ ತೆಗೆದುಕೊಂಡು ಹೋಗಿ ಅವರ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು

ಎಸ್. ಎಂ. ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು(ಡಿ.10) ಬೆಳಗಿನ ಜಾವ 2:30 ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

 

Share This Article