Connect with us

Bengaluru City

ಮಾನವೀಯ ಮೌಲ್ಯ ಎತ್ತಿ ಹಿಡಿದಿದ್ದಾರೆ – ಮುಷ್ಕರ ಹಿಂಪಡೆದ ವೈದ್ಯರಿಗೆ ಸಚಿವರಿಂದ ಧನ್ಯವಾದ

Published

on

ಬೆಂಗಳೂರು: ಸಿಎಂ ಮನವೊಲಿಕೆ ಹಿನ್ನೆಲೆ ನಂಜನಗೂಡು ಟಿಹೆಚ್‍ಒ ಆತ್ಮಹತ್ಯೆ ಪ್ರಕರಣ ಸಂಬಂಧ ಎರಡು ದಿನಗಳಿಂದ ಮೈಸೂರಿನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವೈದ್ಯಾಧಿಕಾರಿಗಳು ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ವೈದ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ. ಇದನ್ನೂ ಓದಿ: ಸಿಎಂ ಮನವೊಲಿಕೆ-ಷರತ್ತು ವಿಧಿಸಿ ಪ್ರತಿಭಟನೆ ಹಿಂಪಡೆದ ವೈದ್ಯರು

ಸಚಿವ ಡಾ. ಸುಧಾಕರ್, ಶ್ರೀರಾಮುಲು ಮತ್ತು ಸಿಎಂ ಪುತ್ರ ವಿಜಯೇಂದ್ರ ಪ್ರತಿಭಟನೆ ಹಿಂಪಡೆದಿದ್ದಕ್ಕೆ ವೈದ್ಯರಿಗೆ ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೈದ್ಯರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ, ನೆನ್ನೆ ಕರೆ ನೀಡಲಾಗಿದ್ದ ಮುಷ್ಕರ ವಾಪಸ್ ಪಡೆದಿರುವ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಧನ್ಯವಾದಗಳು” ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಹಾಗೂ ಕೆಲವು ಬೇಡಿಕೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದ ವೈದ್ಯಾಧಿಕಾರಿಗಳು, ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂಬ ನನ್ನ ಭರವಸೆಗೆ ಬೆಲೆ ಕೊಟ್ಟು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಇಲಾಖೆಯ ವೈದ್ಯಾಧಿಕಾರಿಗಳ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶ್ರೀರಾಮುಲು ಹೇಳಿದ್ದಾರೆ.

ಅಲ್ಲದೇ, ಕೋವಿಡ್ ವ್ಯಾಪಿಸಿರುವ ಸನ್ನಿವೇಶದಲ್ಲಿ ಜನರ ಆರೈಕೆಗೆ ನಿಮ್ಮೆಲ್ಲರ ಸೇವೆ ಅತ್ಯಗತ್ಯ. ಈ ಜವಾಬ್ದಾರಿ ಅರಿತು, ಸಾರ್ವಜನಿಕ ಹಿತದೃಷ್ಟಿಯಿಂದ ಮುಷ್ಕರ ನಡೆಸುವ ನಿರ್ಧಾರ ಹಿಂಪಡೆದಿರುವ ಎಲ್ಲ ಆರೋಗ್ಯಾಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಡಾ.ನಾಗೇಂದ್ರರ ಆತ್ಮಹತ್ಯೆ ದುರದೃಷ್ಟಕರ ಸಂಗತಿ. ತನಿಖೆಯಿಂದ ಹೊರಬರುವ ಸತ್ಯಾಂಶದ ಆಧಾರದ ಮೇಲೆ ಕ್ರಮ ಖಚಿತ ಎಂದು ಸರ್ಕಾರ ಹೇಳಿದೆ. ‘ವೈದ್ಯೋ ನಾರಾಯಣೋ ಹರಿ’ ಎನ್ನುವುದಕ್ಕೆ ಪೂರಕವೆಂಬಂತೆ, ಕೊರೊನಾ ಯುದ್ಧದ ಈ ಸಮಯದಲ್ಲಿ ಸೇನಾನಿಗಳಂತೆ ಹೋರಾಡುತ್ತಿರುವ ವೈದ್ಯಬಂಧುಗಳು ಮುಷ್ಕರದ ನಿರ್ಧಾರ ಕೈ ಬಿಟ್ಟು ಮಾನವೀಯ ಮೌಲ್ಯ ಎತ್ತಿ ಹಿಡಿದಿದ್ದಾರೆ” ಎಂದು ವಿಜಯೇಂದ್ರ ವೈದ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ.

Click to comment

Leave a Reply

Your email address will not be published. Required fields are marked *