ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರ ರಜೆ (Menstrual Leave) ನೀಡಲು ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.
ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ತಿಂಗಳಲ್ಲಿ ಒಂದು ದಿನ ಋತುಚಕ್ರ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವರ್ಷಕ್ಕೆ 12 ದಿನ ವೇತನ ಸಹಿತ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ಊರಿಗೆ ವನ್ಯಜೀವಿ ಆನೆ, ಹುಲಿ, ಚಿರತೆ, ಕರಡಿ ಬಂದ್ರೆ 1926ಗೆ ಕರೆ ಮಾಡಿ: ಈಶ್ವರ್ ಖಂಡ್ರೆ
ಇತ್ತೀಚೆಗಷ್ಟೇ ಋತುಚಕ್ರ ರಜೆ ನೀಡಲು ಕ್ಯಾಬಿನೆಟ್ ನಿರ್ಣಯಿಸಿತ್ತು. ಕ್ಯಾಬಿನೆಟ್ ನಿರ್ಣಯದಂತೆ ಕಾರ್ಮಿಕ ಇಲಾಖೆ ಅಧಿಕೃತ ಅದೇಶ ಹೊರಡಿಸಿದೆ. 2 ಷರತ್ತುಗಳನ್ನ ವಿಧಿಸಿ ರಜೆ ನೀಡಲು ಸಂಸ್ಥೆಗಳಿಗೆ ಸೂಚಿಸಿದೆ.
ಷರತ್ತುಗಳೇನು?
* ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ.
* ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ.
* 18 ವರ್ಷದಿಂದ 52 ವರ್ಷದ ವಯೋಮಿತಿಯ ಎಲ್ಲಾ ಮಹಿಳಾ ನೌಕರರಿಗೆ ಕಡ್ಡಾಯ ರಜೆ ನೀಡಬೇಕು.

