ಬೆಂಗಳೂರು: ಸರ್ಕಾರಿ ಶಾಲೆಗಳ ಎಲ್‌ಕೆಜಿ-ಯುಕೆಜಿ (LKG-UKG) ಮಕ್ಕಳಿಗೂ ಬಿಸಿಯೂಟ (Mid Day Meal) ಯೋಜನೆ ಅನುಷ್ಠಾನಕ್ಕೆ ಸರ್ಕಾರ ಆದೇಶ ಹೊರಡಿಸಿದೆ.
ಡಿಸೆಂಬರ್ 1 ರಿಂದಲೇ ಅನ್ವಯವಾಗುವಂತೆ ಬಿಸಿಯೂಟ, ಕ್ಷೀರಭಾಗ್ಯ, ಮೊಟ್ಟೆ, ಬಾಳೆಹಣ್ಣು ಕೊಡಲಿದೆ. ಬಿಸಿಯೂಟ ಮಾಡುವ ಅಡುಗೆಯವರಿಗೂ ಗೌರವಧನ ನೀಡುವಂತೆ ಆದೇಶದಲ್ಲಿ ಶಿಕ್ಷಣ ಇಲಾಖೆ ಉಲ್ಲೇಸಿದೆ. ಇದನ್ನೂ ಓದಿ: ಡಿವೋರ್ಸ್ ತಡೆಗೆ ರಾಜ್ಯ ಸರ್ಕಾರದಿಂದ ‘ಕೂಡಿ ಬಾಳೋಣ’ ಕೌನ್ಸಿಲಿಂಗ್ ಸೆಂಟರ್
ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಮಾರ್ಗಸೂಚಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಈ ಯೋಜನೆಯ ಫಲಾನುಭವಿಗಳೆಂದು ಪರಿಗಣಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಈ ಯೋಜನೆಯ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿರುವ ಪಿಎಬಿಯ ಸಭಾ ನಡಾವಳಿಯಲ್ಲಿ ಪೂರ್ವ ಪ್ರಾಥಮಿಕ ತರಗತಿ (ಬಾಲವಾಟಿಕಾಗಳು)ಗಳಲ್ಲಿನ 1,98,270 ಮಕ್ಕಳಿಗೆ ಮಧ್ಯಾಹ್ನ ಉಪಾಹಾರ ನೀಡಲು 2,215 ಲಕ್ಷ ರೂ. ಕೇಂದ್ರದ ಪಾಲಿನ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. ಇದನ್ನೂ ಓದಿ: ಕಲಬುರಗಿ-ಬೆಂಗಳೂರು ವಂದೇ ಭಾರತ್ ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆ

