* 15 ದಿನಗಳವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ
ಬೆಂಗಳೂರು: ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ (Electricity Connection) ಕಾಯುತ್ತಿರುವವರಿಗೆ ಕೊನೆಗೂ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಸಿಯಿಂದ (OC) ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ವಿದ್ಯುತ್ ಸಂಪರ್ಕಕ್ಕೆ ಒಸಿಯಿಂದ ವಿನಾಯಿತಿ ಅನುಷ್ಟಾನಕ್ಕೆ ಸಚಿವ ಸಂಪುಟದಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿತ್ತು. ಅದರ ಬೆನ್ನಲ್ಲೇ ಇಂಧನ ಇಲಾಖೆ ಈ ಆದೇಶ ಹೊರಡಿಸಿದೆ. 15 ದಿನಗಳವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಒಸಿ-ಸಿಸಿ ಸಮಸ್ಯೆಗೆ ಮುಕ್ತಿ: 1.54 ಲಕ್ಷ ಮನೆಗಳಿಗೆ ಸಿಗಲಿದೆ ಶಾಶ್ವತ ವಿದ್ಯುತ್ ಸಂಪರ್ಕ
ಜಿಬಿಎ, ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 2400 ಚದರ ಅಡಿಗಳವರೆಗೆ (+20% ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ಕಟ್ಟಡಗಳಿಗೆ ಇದು ಅನ್ವಯ ಆಗಲಿದೆ.
ಜಿ+3 ಅಂತಸ್ತಿನ ಕಟ್ಟಡ, ಸ್ಟಿಲ್ಟ್ ಪಾರ್ಕಿಂಗ್+ 4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳು, ಪೂರ್ಣಗೊಂಡು 2026ರ ಮೇ 31ರ ಒಳಗಾಗಿ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ ಇದು ಅನ್ವಯಿಸಲಿದೆ.
ಗ್ರಾಮೀಣ ಪ್ರದೇಶಗಳಲ್ಲಿ ರೈತರು ವಾಸಿಸುವ ಮನೆ, ತೋಟದ ಮನೆ, ಕೃಷಿ ಉಪಕರಣಗಳನ್ನು ಇಡುವ ಮನೆ, ದನದ ಕೊಟ್ಟಿಗೆ, ರೇಷ್ಮೆ ಗೂಡಿನ ಮನೆ.. ಇವುಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ಸಿಎಂ ಆಗ್ತಿದ್ದಂತೆ ರಾಜ್ಯದ ಜನತೆಗೆ ಗಿಫ್ಟ್ – ರಾಜ್ಯಾದ್ಯಂತ 2,500 ಚದರ ಅಡಿವರೆಗೆ ಒಸಿ ವಿನಾಯ್ತಿ
