ಬೆಂಗಳೂರು: ಬಾಣಂತಿಯರ ಸರಣಿ ಸಾವು ಬಳಿಕ ಆಹಾರ ಸುರಕ್ಷತಾ ಇಲಾಖೆ (Food Safety Department) ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು (Drug Control Department) ಸರ್ಕಾರ ವಿಲೀನಗೊಳಿಸಿದೆ.
ಈಗ ಎರಡು ಇಲಾಖೆಯನ್ನು ವಿಲೀನಗೊಳಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಅಂತಾ ಹೊಸ ಮರುನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು – ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು
Advertisement
Advertisement
ರಾಜ್ಯದಲ್ಲಿ ಪರಿಶಿಷ್ಟ ಜಾತಿ-ಪಂಗಡಗಳ ಸಮುದಾಯದ ಜನರಿಗೆ ಆರೋಗ್ಯ ಸೇವೆಗಾಗಿ, ಹೆಚ್ಚು ಚಿಕಿತ್ಸಾ ವೆಚ್ಚ ಇರುವ ಕಾಯಿಲೆಗಳಿಗೆ ಹಾಗೂ ವಿರಳ ಆರೋಗ್ಯ ಸೇವೆ ಒದಗಿಸಲು ಕಾರ್ಫಸ್ ಫಂಡ್. ಒಟ್ಟು 45 ಕೋಟಿಯನ್ನು ಸರ್ಕಾರ ಮೀಸಲಿಟ್ಟಿದೆ.
Advertisement
Advertisement
ಬಳ್ಳಾರಿ ಹಾಗೂ ಬೆಳಗಾವಿಯಲ್ಲಿ ಬಾಣಂತಿಯರ ಸಾವು ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಬೆಳಗಾವಿಯ ಕುಂದಾನಗರಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ಆರು ತಿಂಗಳಲ್ಲಿ 322 ಶಿಶುಗಳು ಮತ್ತು 29 ಬಾಣಂತಿಯರು ಮೃತಪಟ್ಟಿದ್ದಾರೆ. ಅಲ್ಲದೇ, ರಾಯಚೂರಿನಲ್ಲಿ ಅಕ್ಟೋಬರ್ ತಿಂಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಆಯ್ತು ಈಗ ರಾಯಚೂರು – ಅಕ್ಟೋಬರ್‌ನಲ್ಲಿ ನಾಲ್ವರು ಬಾಣಂತಿಯರು ಸಾವು