ಬೆಂಗಳೂರು: ಕಬ್ಬಿನ ಉಪ ಉತ್ಪನ್ನವಾದ (Cane Byproducts) ಎಥೆನಾಲ್ ಲಾಭಾಂಶವನ್ನು ರೈತರಿಗೆ ನೀಡುವ ಸಂಬಂಧ ಸರ್ಕಾರ ಈಚೆಗೆ ನಿರ್ಧಾರ ಕೈಗೊಂಡಿತ್ತು. ಅದರಂತೆ ಇಂದು ಆದೇಶ ಹೊರಡಿಸಿದ್ದು, ಪ್ರತಿ ಮೆಟ್ರಿಕ್ ಟನ್‌ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಸಂಬಂಧ ಸರ್ಕಾರ (Karnataka Government) ತಿಳಿಸಿದೆ.
ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ಬೇಕು ಎಂದು ಆಗ್ರಹಿಸಿ ರೈತರು ಹೋರಾಟ ನಡೆಸುತ್ತಿದ್ದರು. ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ (Shankar Patil Munenakoppa) ಅವರು ಡಿ.5ರಂದು ನಡೆದ ಕಬ್ಬು ನಿಯಂತ್ರಣ ಮಂಡಳಿಯ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್‌ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಘೋಷಣೆ ಮಾಡಿದ್ದು, ಅದೇ ಪ್ರಕಾರವಾಗಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಸೈನಿಕರ ಕಲ್ಯಾಣ, ಸೇನೆಯ ಸಬಲೀಕರಣಕ್ಕೆ ಸರ್ಕಾರ ಬದ್ಧ: ಗೆಹ್ಲೋಟ್
ಕರ್ನಾಟಕ ಕಬ್ಬು ಅಧಿನಿಯಮ 2013 ಹಾಗೂ ತಿದ್ದುಪಡಿ ಅಧಿನಿಯಮ, 2014ರ ಕಲಂ 4(ಎ)ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಎಥನಾಲ್ ಉತ್ಪಾದಿಸುವ ರಾಜ್ಯದ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡಿದ ರೈತರಿಗೆ ಮೊದಲ ಕಂತಿನಲ್ಲಿ ಕೇಂದ್ರ ಸರ್ಕಾರವು 2022-23ನೇ ಸಾಲಿಗೆ ನಿಗದಿಪಡಿಸಿರುವ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯ ಜೊತೆಗೆ ಪ್ರತಿ ಮೆಟ್ರಿಕ್ ಟನ್‌ವೊಂದಕ್ಕೆ 50 ರೂ. ಹೆಚ್ಚುವರಿಯಾಗಿ ಪಾವತಿಸಲು ಅಧಿಸೂಚನೆಯಲ್ಲಿ ಆದೇಶಿಸಿದೆ.
2022-23ನೇ ಸಾಲಿನಲ್ಲಿ ಕಬ್ಬು ನುರಿಸುವ ಹಂಗಾಮು ಮುಗಿದ ನಂತರ ವಾಸ್ತವಿಕವಾಗಿ ಸಕ್ಕರೆ, ಎಥೆನಾಲ್ ಮತ್ತು ಇತರೆ ಉಪ ಉತ್ಪನ್ನಗಳ ಮಾರಾಟದಿಂದ ಬರುವ ಅಂತಿಮ ಆದಾಯವನ್ನು ಹಂಚಿಕೆ ಸೂತ್ರದ ಪ್ರಕಾರ ಪರಿಗಣಿಸಿ ಅಂತಿಮ ಕಬ್ಬಿನ ದರ ನಿರ್ಧರಿಸಲಾಗುವುದು. ಇದನ್ನೂ ಓದಿ: ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಖುಷಿ ಪಡುವೆ: ಸಿದ್ದರಾಮಯ್ಯ