ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ ತಿಂಗಳ ಅನ್ನಭಾಗ್ಯ (Anna Bhagya) ಅಕ್ಕಿಗೆ ವಿತರಣೆಗೆ ಬ್ರೇಕ್ ಹಾಕಲಾಗಿದೆ. ಈ ತಿಂಗಳ ಪಡಿತರ ವಿತರಣೆ ಆಗುತ್ತಿಲ್ಲ.
ರಾಜ್ಯ ಸರ್ಕಾರದಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿತ್ತು. ಆದರೆ, ಈ ತಿಂಗಳು ಕೇಂದ್ರ ಸರ್ಕಾರದ ಪಾಲಿನ 4 ಕೆಜಿ ಅಕ್ಕಿ, 6 ಕೆಜಿ ರಾಗಿ ವಿತರಣೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿ ಯಾಕೆ ಅಕ್ಕಿ ವಿತರಣೆ ಎನ್ನುವುದು ಪ್ರಶ್ನೆ ಆಗಿದೆ.
ಮಲ್ಲೇಶ್ವರಂನ ನ್ಯಾಯಬೆಲೆ ಅಂಗಡಿಯಲ್ಲಿ ಕೇಂದ್ರ ಸರ್ಕಾರದ ಪಾಲಿನ 4 ಕೆಜಿ ಅಕ್ಕಿ ಮತ್ತು 6 ಕೆಜಿ ರಾಗಿ ವಿತರಣೆ ಮಾಡಲಾಗುತ್ತಿದೆ. ಮುಂದಿನ ತಿಂಗಳು ಅನ್ನಭಾಗ್ಯದ 10 ಕೆಜಿ ಅಕ್ಕಿ ವಿತರಣೆ ಆಗಲಿದೆ ಎಂದು ನ್ಯಾಯಬೆಲೆ ಅಂಗಡಿ ಮಾಲೀಕರು ತಿಳಿಸಿದ್ದಾರೆ.
