– GVK ಅಂಬುಲೆನ್ಸ್ ಸೇವೆಗೆ ಬಿಗ್ ಶಾಕ್
ಬೆಂಗಳೂರು: ರಾಜ್ಯದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮುಂದಾಗಿದ್ದಾರೆ. ಅಂಬುಲೆನ್ಸ್ (Ambulance) ಬಿಕ್ಕಟ್ಟಿಗೆ ಬ್ರೇಕ್ ಹಾಕಲು ಮುಂದಾಗಿರುವ ಆರೋಗ್ಯ ಇಲಾಖೆಯು (Heath Department) ಆರೋಗ್ಯ ಕವಚ 108 ಅನುಷ್ಠಾನಕ್ಕೆ ತಾಂತ್ರಿಕ ಸಮಿತಿ ರಚಿಸಿದೆ.
Advertisement
108 ಆರೋಗ್ಯ ಕವಚ, 104 ಆರೋಗ್ಯ ಸಹಾಯವಾಣಿ ಯೋಜನೆಗಳ ಉನ್ನತ್ತೀಕರಣ ಹಾಗೂ ಮಾರ್ಗದರ್ಶನಕ್ಕೆ ಸಮಿತಿ ರಚಿಸಲಾಗಿದೆ. ನಿಮ್ಹಾನ್ಸ್ ಪ್ರಭಾರ ನಿರ್ದೇಶಕರು ಹಾಗೂ ಐಐಐಟಿ ನಿರ್ದೇಶಕ ಡಾ.ಜಿ. ಗುರುರಾಜ್ ಅವರ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಜಿಲ್ಲಾವಾರು ಪ್ರತಿಭಟನೆ – ಸರ್ಕಾರದ ಧೋರಣೆಗೆ ತೀವ್ರ ಖಂಡನೆ
Advertisement
Advertisement
ಅಲ್ಲದೇ, ಆರೋಗ್ಯ ಸೇವೆಗಳ ಟೆಂಡರ್ ನ್ಯೂನತೆ ಲೋಪಗಳ ಅಧ್ಯಯನಕ್ಕೆ ಸರ್ಕಾರ ಮುಂದಾಗಿದೆ. ಟೆಂಡರ್ ನ್ಯೂನತೆ ಲೋಪಗಳ ಅಧ್ಯಯನ ನಡೆಸಲು ಹಾಗೂ ಸಲಹೆ ನೀಡಲು ತಜ್ಞರ ಸಲಹಾ ಸಮಿತಿ ರಚನೆ ಮಾಡಲಾಗಿದೆ. ಆ ಮೂಲಕ GVK ಅಂಬುಲೆನ್ಸ್ ಸೇವೆಗೆ ಬಿಗ್ ಶಾಕ್ ನೀಡಿದೆ.
Advertisement
ಆರೋಗ್ಯ ಇಲಾಖೆಯ ಮೇಜರ್ ಸರ್ಜರಿಗೆ ಮುಂದಾಗಿರುವ ಸರ್ಕಾರ, ಹಳೆಯ ಸರ್ಕಾರದ GVK ಟೆಂಡರ್‌ಗೆ ಕೊಕ್ ಕೊಟ್ಟಿದೆ. ಆ ಮೂಲಕ ‘108’ ಅಂಬುಲೆನ್ಸ್ ಸೇವೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದೆ. GVK ಸಂಸ್ಥೆಯ ವಿರುದ್ಧ ಸಾಲು ಸಾಲು ಆರೋಪ ಹಾಗೂ ದೂರು ಕೇಳಿಬಂದ ಹಿನ್ನೆಲೆ ಸರ್ಕಾರ ಜಿವಿಕೆ ಟೆಂಡರ್‌ಗೆ ಕೊಕ್ ಕೊಟ್ಟಿದೆ. ಇದನ್ನೂ ಓದಿ: ಪಿಎಸ್‍ಐ ಹಗರಣ ನ್ಯಾಯಾಂಗ ತನಿಖೆ ಕಾಂಗ್ರೆಸ್‍ನ ದ್ವೇಷದ ರಾಜಕಾರಣ: ಬೊಮ್ಮಾಯಿ
ಕಳೆದ ಮೂರು ತಿಂಗಳ ಹಿಂದೆ ಆರೋಗ್ಯ ಕವಚ ಅಡಿಯಲ್ಲಿನ ‘108’ ಅಂಬುಲೆನ್ಸ್ ಸೇವೆಗೆ ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್‌ನಲ್ಲಿಯೂ ಜಿವಿಕೆ ತೆರೆ ಹಿಂದಿನಿಂದ ಭಾಗವಹಿಸಿತ್ತು. ಆದರೆ ಈಗ ಟೆಂಡರ್ ಪ್ರಕ್ರಿಯೆಯನ್ನು ಸರ್ಕಾರ ಕೈಬಿಟ್ಟಿದೆ. ಟೆಂಡರ್ ಪ್ರಕ್ರಿಯೆ ಖರೀದಿಯಲ್ಲಿನ ವಿಧಾನ, ಟೆಂಡರ್ ಪ್ಲೋಟಿಂಗ್‌ನಲ್ಲಿನ ನ್ಯೂನತೆ, ಆಕ್ಷೇಪಣೆಗಳು, ತಾಂತ್ರಿಕ ದೋಷ ಪರಿಶೀಲಿಸಿ ಉತ್ತಮ ಸೇವೆ ನೀಡಲು ಈ ಸಮಿತಿ ರಚಿಸಿದೆ.
ಉತ್ತಮ ಆರೋಗ್ಯ ಸೇವೆಗೆ ಯಾವ ರೀತಿಯ ಸೌಲಭ್ಯ? ಏನೆಲ್ಲ ತಂತ್ರಜ್ಞಾನ ಇರಬೇಕು? ಯಾವೆಲ್ಲ ಮಾರ್ಗಸೂಚಿ ಸೌಲಭ್ಯ ಅಳವಡಿಸಿಕೊಂಡಿರಬೇಕು? ಈ ಎಲ್ಲ ಮಾನದಂಡಗಳ ಆಧಾರದ ಮೇಲೆ ಸಲಹೆ ಹಾಗೂ ವರದಿ ನೀಡುವ ಕಾರ್ಯವನ್ನು ತಜ್ಞರ ಸಲಹಾ ಸಮಿತಿ ಮಾಡಲಿದೆ. ಐಐಐಟಿ ನಿರ್ದೇಶಕರು, ನಿಮ್ಹಾನ್ಸ್ ನಿರ್ದೇಶಕರು, ವಿಟಿಯು ಮಾಜಿ ಕುಲಪತಿಗಳು, ಕಾರ್ಮಿಕ ಇಲಾಖೆಯ ಆಯುಕ್ತರು, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC ) ತಜ್ಞರನ್ನ ಸಮಿತಿ ಒಳಗೊಂಡಿದೆ.
Web Stories