ಮೈಸೂರು ದಸರಾ ಅದ್ಧೂರಿ ಆಚರಣೆಗೆ ಸರ್ಕಾರದ ಸಿದ್ಧತೆ – ಸೆಪ್ಟೆಂಬರ್ 26ರಿಂದ ನಾಡಹಬ್ಬ

Public TV
2 Min Read
mysuru

ಬೆಂಗಳೂರು: ಕೊರೊನಾ ಬಳಿಕ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

MYSURU DASRA MEETING

ಸೆಪ್ಟೆಂಬರ್ 26ರಂದು ನವರಾತ್ರಿ ಪೂಜೆ ಆರಂಭವಾಗಲಿದ್ದು, ಅಕ್ಟೋಬರ್ 4ರಂದು ಜಂಬೂ ಸವಾರಿ ನಡೆಸಲು ಸರ್ಕಾರ ಮುಂದಾಗಿದೆ. ಶ್ರೀರಂಗಪಟ್ಟಣ, ಚಾಮರಾಜನಗರಗಳಲ್ಲೂ ಅದ್ಧೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಮುಂದಿನ ಎರಡು ತಿಂಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ದಸರಾಗೆ ಪ್ರಚಾರ ನೀಡಲಾಗುತ್ತದೆ. 15 ದಿನಗಳ ಮುಂಚೆಯೇ ವಸ್ತು ಪ್ರದರ್ಶನ ಪ್ರಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದ 92 ಮಂದಿ ಸಿವಿಲ್ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ರ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿದ ಅವರು, ದಸರಾ ಹಬ್ಬಕ್ಕೆ 15 ದಿನಗಳ ಮುನ್ನವೇ ವಸ್ತು ಪ್ರದರ್ಶನ ಉದ್ಘಾಟಿಸಲು ಸೂಚಿಸಲಾಗಿದೆ. ಶ್ರೀರಂಗಪಟ್ಟಣ ಹಾಗೂ ಚಾಮರಾಜನಗರ ದಸರಾಕ್ಕೆ ತಲಾ 1.00 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡುವುದರ ಜೊತೆ ಪ್ರತಿನಿತ್ಯ ಒಬ್ಬ ರಾಷ್ಟ್ರಮಟ್ಟದಲ್ಲಿ ಖ್ಯಾತಿಯಳ್ಳ ಕಲಾವಿದರಿಂದ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

MYSURU DASRA MEETING 1

ಅರಮನೆ ಆಡಳಿತ ಮಂಡಳಿಯು ಅರಮನೆ ವ್ಯಾಪಿಯೊಳಗಿನ ವೆಚ್ಚವನ್ನು ಭರಿಸಲಿದೆ. ಮೂಡಾ ವತಿಯಿಂದ 10 ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಈ ಬಾರಿ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಅನುದಾನ ಬಳಕೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ. ಉಳಿದ ಮೊತ್ತವನ್ನು ಸರ್ಕಾರ ಭರಿಸಲಿದೆ ಎಂದರು. ಇದನ್ನೂ ಓದಿ: ಮದರಸ ಟೆರರಿಸ್ಟ್‌ಗಳನ್ನು ತಯಾರು ಮಾಡುವ ಕೇಂದ್ರ: ಮುತಾಲಿಕ್

ಸರ್ಕಾರದ ಎಲ್ಲಾ ಜಾಹೀರಾತು, ಪ್ರಕಟಣೆಗಳು, ವೆಬ್‍ಸೈಟ್, ಸಾಮಾಜಿಕ ಮಾಧ್ಯಮಗಳಲ್ಲಿ ಮೈಸೂರು ದಸರಾ ಲಾಂಛನವನ್ನು ಪ್ರಕಟಿಸಬೇಕು. ಮುಂಬೈ, ದೆಹಲಿ ಹಾಗೂ ಚನ್ನೈ ವಿಮಾನನಿಲ್ದಾಣಗಳಲ್ಲಿ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಮೈಸೂರು ದಸರಾ ಕುರಿತು ಪ್ರಚಾರ ಮಾಡಬೇಕೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಿಗೆ ಸೂಚಿಸಲಾಗಿದೆ. ಒಂದು ವಾರದೊಳಗೆ ಮೈಸೂರು ಟೂರಿಸಂ ಸರ್ಕಿಟ್ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಹಾಗೂ ಖಾಸಗಿ ವಲಯದ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಲಾಗುವುದು. ಸರ್ಕಿಟ್ ನಲ್ಲಿ ಬೇಲೂರು, ಹಳೇಬೀಡು ಮುಂತಾದ ಪ್ರದೇಶಗಳಿಗೆ ಪ್ರವಾಸದ ಯೋಜನೆ, ಪ್ರಯಾಣ ಹಾಗೂ ವಸತಿ ಎಲ್ಲವೂ ಒಂದೇ ಟಿಕೆಟ್‍ನಲ್ಲಿ ಸಾಧ್ಯವಾಗಲಿದೆ. ಇದಕ್ಕೆ ವೆಬ್‍ಸೈಟ್ ಕೂಡ ಅಭಿವೃದ್ಧಿಪಡಿಸಲಾಗುತ್ತಿದೆ. ಮೈಸೂರು ದಸರಾಕ್ಕೆ ಇದು ಪೂರಕವಾಗಲಿದೆ ಎಂದರು.

ನಾಡಹಬ್ಬಕ್ಕೆ ಸಂಬಂಧಿಸಿದಂತೆ ಹಿಂದೆ ಅನುಸರಿಸುತ್ತಿದ್ದ ಗಜಪಯಣ ಸೇರಿದಂತೆ ಪಾರಂಪರಿಕ ಪದ್ದತಿಗಳನ್ನು ಪುನ: ಪ್ರಾರಂಭಿಸಲಾಗುವುದು. ಇದರಿಂದ ಸ್ಥಳೀಯ ಹಾಗೂ ಗ್ರಾಮೀಣ ಭಾಗದ ಜನರು ತೊಡಗಿಕೊಂಡಂತಾಗುತ್ತದೆ ಎಂದು ತಿಳಿಸಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *