ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ (Congress Guarantee) ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು (TSP) ಬಜೆಟ್‌ನಲ್ಲಿ ಮೀಸಲಿಟ್ಟ ಹಣ ಬಳಕೆ ವಿಚಾರವಾಗಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ (National Commission for Scheduled Castes) ಮಧ್ಯಪ್ರವೇಶ ಮಾಡಿದೆ.
ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ವಿವರಣೆ ಕೇಳಿದೆ. 7 ದಿನಗಳ ಒಳಗಾಗಿ ಸಂಪೂರ್ಣ ವರದಿ ನೀಡುವಂತೆ ಪತ್ರದಲ್ಲಿ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – 5 ಸ್ಥಳಗಳನ್ನು ತಿಳಿಸಿದ ಎಂಬಿಪಿ
Advertisement
Advertisement
ಕರ್ನಾಟಕ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕರ್ನಾಟಕ ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಬುಡಕಟ್ಟು ಉಪ ಯೋಜನೆ (TSP) ಅಡಿಯಲ್ಲಿ ನಿಗದಿಪಡಿಸಿದ ಹಣವನ್ನು ಬಳಸಿಕೊಳ್ಳಲು ನಿರ್ಧರಿಸಿದೆ ಎಂಬ ಮಾಹಿತಿ ಇದೆ. ಕರ್ನಾಟಕ ಸರ್ಕಾರವು ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಂಚಿಕೆಯಿಂದ ಗ್ಯಾರಂಟಿ ಯೋಜನೆಗಳಿಗೆ ಯೋಜನೆಗಳಿಗೆ 14,730.53 ಕೋಟಿ ರೂ ಬಳಸಿಕೊಳ್ಳಲು ತೀರ್ಮಾನ ತೆಗೆದುಕೊಂಡಿದೆ. ಇದನ್ನೂ ಓದಿ: SSLC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ.31.02 ವಿದ್ಯಾರ್ಥಿಗಳು ಪಾಸ್
Advertisement
Advertisement
ರಾಜ್ಯಗಳಲ್ಲಿನ ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಮತ್ತು ವಿಶೇಷ ಕೇಂದ್ರ ಸಹಾಯ (ಎಸ್‌ಸಿಎ)ವೂ ಇದೆ. ಹಾಗಾಗಿ ಭಾರತ ಸಂವಿಧಾನದ 338 ನೇ ವಿಧಿಯ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಕಡ್ಡಾಯವಾಗಿ ಅನುಸರಿಸಲು ಆಯೋಗ ಬದ್ಧವಾಗಿದೆ. ದಯವಿಟ್ಟು ಈ ವಿಷಯದ ಬಗ್ಗೆ ವಿವರವಾದ ವರದಿಯನ್ನ 7 ದಿನಗಳೊಳಗೆ ಆಯೋಗಕ್ಕೆ ಒದಗಿಸಬೇಕೆಂದು ಪತ್ರ ಬರೆದಿದೆ. ಅಲ್ಲದೇ ಇದನ್ನು ಅತ್ಯಂತ ತುರ್ತು ಎಂದು ಪರಿಗಣಿಸಬೇಕೆಂದು ಆಯೋಗ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.