Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ – ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಖಂಡನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ – ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

Bengaluru City

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ – ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

Public TV
Last updated: January 8, 2026 11:55 pm
Public TV
Share
3 Min Read
Siddaramaiah Pinarayi Vijayan
SHARE

ಬೆಂಗಳೂರು: ಕನ್ನಡದ ಮೇಲೆ ಕೇರಳ ಸರ್ಕಾರ ಸವಾರಿ ಮಾಡುವ ತರಲೆ ಬಿಟ್ಟಿಲ್ಲ. ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುತ್ತಿದೆ. ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಜಾರಿಗೆ ತರಲು ಹೊರಟ್ಟಿದ್ದು, ಕರ್ನಾಟಕದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಸಿಎಂ ಟ್ವೀಟ್‌ನಲ್ಲೇನಿದೆ?
ಕೇರಳ ಸರ್ಕಾರದ ನಡೆಯನ್ನ ಸಿಎಂ ಸಿದ್ದರಾಮಯ್ಯ ತೀವ್ರವಾಗಿ ವಿರೋಧಿಸಿದ್ದು, ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ‍್ಯದ ಮೇಲಿನ ಪ್ರಹಾರ ಎಂದು ಟ್ವೀಟ್ ಮೂಲಕ ವಿಷಾದಿಸಿದ್ದಾರೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಅಂತಾ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ-2025 ಅನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರಿಗೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ‍್ಯ ಇದೆ.

ಈ ಹಿನ್ನೆಲೆಯಲ್ಲಿ ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಎನ್ನುವುದು ಕೇವಲ ಭಾಷೆ ಅಲ್ಲ, ಅದು ಅವರಿಗೆ ಘನತೆಯ ಬದುಕು ನೀಡುವ ಅಸ್ಮಿತೆಯಾಗಿರುತ್ತದೆ. ಮಾತೃಭಾಷೆಯಲ್ಲಿ ಕಲಿಯುವ ಮಕ್ಕಳು ಸುಲಭದಲ್ಲಿ ವಿಷಯಗಳನ್ನು ಗ್ರಹಿಸುತ್ತಾರೆ ಎನ್ನುವದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅವರ ಮೇಲೆ ಅನ್ಯಭಾಷೆಯನ್ನು ಹೇರುವುದರಿಂದ ಅವರ ಕಲಿಕಾ ಸಾಮರ್ಥ್ಯವನ್ನು ಕುಂದಿಸುವುದು ಮಾತ್ರವಲ್ಲ, ಒಂದು ಸ್ವತಂತ್ರಭಾಷೆಯ ಅವಸಾನಕ್ಕೆ ದಾರಿ ಮಾಡಿಕೊಟ್ಟ ಹಾಗಾಗುತ್ತದೆ.

ಕಾಸರಗೋಡಿನ ಜನ ಹಲವು ತಲೆಮಾರುಗಳಿಂದ ಕನ್ನಡ ಮಾಧ್ಯಮದಲ್ಲಿ ಓದಿದ್ದಾರೆ, ನಿತ್ಯದ ಬದುಕಿನಲ್ಲಿ ಕನ್ನಡವನ್ನು ನಿರಂತರವಾಗಿ ಬಳಸುತ್ತಾ ಬಂದಿದ್ದಾರೆ. ಕಾಸರಗೋಡು ಜಿಲ್ಲೆಯ ಶೇಕಡಾ 70ರಷ್ಟು ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಮತ್ತು ಕನ್ನಡ ಮಾಧ್ಯಮದಲ್ಲಿಯೇ ಕಲಿಯುವುದನ್ನು ಬಯಸುತ್ತಾರೆ ಎಂಬುದು ಅಲ್ಲಿನ ಕನ್ನಡಿಗರ ಒಕ್ಕೊರಲ ಅಭಿಪ್ರಾಯವಾಗಿದೆ. ಯಾವುದೇ ಒಂದು ಭಾಷೆ ಮತ್ತೊಂದು ಭಾಷೆಯ ವಿರುದ್ಧವಾಗಿ ಇರುವುದಿಲ್ಲ. ಭಾರತ ಬಹುಭಾಷೆ, ಬಹುಸಂಸ್ಕೃತಿ ಮತ್ತು ಬಹುಧರ್ಮದ ತೊಟ್ಟಿಲಾಗಿದೆ. ಈ ಬಹುತ್ವದ ವಾತಾವರಣಕ್ಕೆ ಧಕ್ಕೆ ಉಂಟು ಮಾಡುವ ಪ್ರಯತ್ನ ಅಪಾಯಕಾರಿಯಾಗಿದೆ.

ಭಾಷೆಯೂ ಸೇರಿದಂತೆ ಅಲ್ಪಸಂಖ್ಯಾತರ ಹಿತರಕ್ಷಣೆಯ ವಿಚಾರದಲ್ಲಿ ನಾವೆಲ್ಲರೂ ಗೌರವಿಸುವ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಸಂವಿಧಾನದ 29 ಮತ್ತು 30ನೇ ಪರಿಚ್ಛೇದಗಳು ದೇಶದ ಯಾವುದೇ ಭಾಗದಲ್ಲಿ ವಾಸಿಸುತ್ತಿರುವವರಿಗೆ ತಮ್ಮ ಭಾಷೆ, ಲಿಪಿ ಮತ್ತು ಸಂಸ್ಕೃತಿ ರಕ್ಷಿಸಿಕೊಳ್ಳುವ ಹಕ್ಕನ್ನು ನೀಡಿದೆ. ಅವರಿಗೆ ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿ ನಡೆಸುವ ಹಕ್ಕನ್ನೂ ನೀಡುತ್ತದೆ. ಸಂವಿಧಾನದ 350 (ಎ) ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ‍್ಯವನ್ನು ನೀಡಿದೆ. ಸಂವಿಧಾನದ 350(ಬಿ) ಅಲ್ಪಸಂಖ್ಯಾತರ ರಕ್ಷಣೆಯ ಖಾತರಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರ ಅಲ್ಪಸಂಖ್ಯಾತರ ಭಾಷಾ ಸ್ವಾತಂತ್ರ‍್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರದು.

ಕರ್ನಾಟಕದಲ್ಲಿ ನಾವು ಕನ್ನಡ ಭಾಷೆಯನ್ನು ಪೊರೆಯುವ ಕೆಲಸ ಮಾಡಿದ ಹಾಗೆ, ಕೇರಳ ರಾಜ್ಯದಲ್ಲಿ ಮಲೆಯಾಳಿ ಭಾಷೆಯನ್ನು ಬೆಳೆಸುವ ಮತ್ತು ಉಳಿಸುವ ಸರ್ವ ಸ್ವಾತಂತ್ರ‍್ಯ ಅಲ್ಲಿನ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ಒಂದು ಭಾಷೆಯ ಮೇಲೆ ಇನ್ನೊಂದು ಭಾಷೆಯನ್ನು ಹೇರುವ ಪ್ರಯತ್ನ ಸಲ್ಲದು.

ಕೇರಳ ಸರ್ಕಾರ ಈ ಮಸೂದೆಯನ್ನು ಜಾರಿಗೊಳಿಸಲು ಹೊರಟರೆ ಕನ್ನಡಿಗರು ಇದನ್ನು ಒಕ್ಕೊರಲಿನಿಂದ ವಿರೋಧಿಸಲಿದ್ದಾರೆ. ಕಾಸರಗೋಡಿನ ಕನ್ನಡಿಗರ ಜೊತೆಯಲ್ಲಿ ನಿಂತು ಅವರ ಭಾಷಾ ಸ್ವಾತಂತ್ರ‍್ಯದ ರಕ್ಷಣೆಗೆ ಸರ್ವರೀತಿಯ ಬೆಂಬಲವನ್ನು ನೀಡಲಿದ್ದಾರೆ.

TAGGED:kannadakeralaMalayalam language Billsiddaramaiah
Share This Article
Facebook Whatsapp Whatsapp Telegram

Cinema news

darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World

You Might Also Like

Rain 1
Belgaum

ರಾಜ್ಯದಲ್ಲಿ ಮುಂದುವರಿದ ಆಲಿಕಲ್ಲು ಮಳೆಯಬ್ಬರ – ಅಲ್ಲಲ್ಲಿ ಕಾಶ್ಮೀರದಂತ ದೃಶ್ಯ ಸೆರೆ

Public TV
By Public TV
30 seconds ago
Cucumber Industry
Districts

ಹಾಸನದ ಮಿಡಿ ಸೌತೆ ಉದ್ಯಮಕ್ಕೆ ತಟ್ಟಿದ ಇರಾನ್‌ – ಇಸ್ರೇಲ್ ಯುದ್ಧದ ಬಿಸಿ

Public TV
By Public TV
30 minutes ago
Accident between two Thar cars on the highway Chikkaballapura
Chikkaballapur

ಹೈವೇಯಲ್ಲಿ ಎರಡು ಥಾರ್ ಕಾರುಗಳ ಮಧ್ಯೆ ಅಪಘಾತ

Public TV
By Public TV
50 minutes ago
Srirama pattabhisheka
Latest

ಯುಗಾದಿ ವಿಶೇಷ | ಶ್ರೀರಾಮನ ಪಟ್ಟಾಭಿಷೇಕ – ಕೆಡುಕಿಂದ ಒಳಿತಿನೆಡೆ ನಡೆವ ಸಂಕೇತ

Public TV
By Public TV
51 minutes ago
Weather 1
Bengaluru City

ಬೆಂಗಳೂರಿನಲ್ಲಿ ಮೊದಲ ವರ್ಷಧಾರೆ – ಮುಂದಿನ 4 ದಿನ ರಾಜ್ಯಾದ್ಯಂತ ಮಳೆ

Public TV
By Public TV
1 hour ago
Bengaluru IIM passout Sofia Firdous is Odisha first Muslim woman MLA 2
Bengaluru City

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?