ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್‌ – ಮುಸ್ಲಿಮರ ಓಲೈಕೆ ರಾಜಕೀಯ ಎಂದು ಬಿಜೆಪಿ ಕಿಡಿ

Public TV
2 Min Read
Hubballi Riot
ಹುಬ್ಬಳ್ಳಿ ಗಲಭೆ ವೇಳೆ ಪಲ್ಟಿಯಾದ ಪೊಲೀಸ್‌ ವಾಹನ

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣವನ್ನು (Hubballi Riots Case) ರಾಜ್ಯ ಸರ್ಕಾರ ವಾಪಸ್‌ ಪಡೆಯಲು  ಸರ್ಕಾರ ನಿರ್ಧಾರ ಕೈಗೊಂಡಿದ್ದು ಈಗ ಈಗ ವಿವಾದಕ್ಕೆ ಕಾರಣವಾಗಿದೆ.

ಗುರುವಾರ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ (Cabinet Meeting) ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಂಡಿದ್ದಕ್ಕೆ ಬಿಜೆಪಿ (BJP) ಆಕ್ರೋಶ ವ್ಯಕ್ತಪಡಿಸಿದೆ.

ಬಿಜೆಪಿಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಸರ್ಕಾರದ ನಡೆಗೆ ಖಂಡನೆ ವ್ಯಕ್ತಪಡಿಸಿ ಕಿಡಿಕಾರಿದ್ದಾರೆ. ಮುಸ್ಲಿಮರನ್ನು ಒಲೈಕೆ ಮಾಡಲು ಕೇಸ್‌ ಹಿಂಪಡೆಯಲಾಗಿದೆ ಎಂದು ಹೇಳಿ ಡಿಕೆ ಶಿವಕುಮಾರ್ (DK Shivakumar) ಹೆಸರು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

hbl 3

ಪೋಸ್ಟ್‌ನಲ್ಲಿ ಏನಿದೆ?
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಗಲಭೆ ಪ್ರಕರಣವನ್ನು ಕಾನೂನು ಮತ್ತು ಪೊಲೀಸ್ ಇಲಾಖೆಗಳ ವಿರೋಧದ ನಡುವೆಯೂ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ. ಎಐಎಂಐಎಂ ಮುಖಂಡರಾದ ಮೊಹಮ್ಮದ್ ಆರಿಫ್ ಮತ್ತು ಇತರರು ಪೊಲೀಸರ ಮೇಲೆ ದಾಳಿ ಮಾಡಿ ಠಾಣೆಗೆ ನುಗ್ಗುವುದಾಗಿ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯಲ್ಲಿ ಪೊಲೀಸರ ಹತ್ಯೆಗೆ ಸಂಚು- ಅಟ್ಟಾಡಿಸಿ ಕೊಲ್ಲಲು ಮುಂದಾಗಿದ್ದ ಗಲಭೆಕೋರರು

ಈ ಗಲಭೆ ಮತ್ತು ಕಲ್ಲು ತೂರಾಟದಲ್ಲಿ ಹಲವಾರು ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇತ್ತೀಚೆಗೆ ಸರ್ಕಾರಕ್ಕೆ ಪತ್ರ ಬರೆದು ಪ್ರಕರಣವನ್ನು ಕೈಬಿಡುವಂತೆ ಮನವಿ ಮಾಡಿದ್ದರು. ಈಗ ಈ ಪ್ರಕರಣವನ್ನು ಕೈ ಬಿಡಲಾಗಿದೆ. ಇದು ಮುಸ್ಲಿಂ ಓಲೈಕೆಯ ಕಾಂಗ್ರೆಸ್‌ ರಾಜಕೀಯವಲ್ಲದೆ ಮತ್ತೇನೂ ಅಲ್ಲ ಎಂದು ಬರೆದಿದ್ದಾರೆ.

ಏನಿದು ಪ್ರಕರಣ?
ಏಪ್ರಿಲ್ 16 ರಂದು ಯುವಕನೊಬ್ಬ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದ. ಈ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದು ಉದ್ರಿಕ್ತರು ಹಳೆ ಹುಬ್ಬಳ್ಳಿ ಠಾಣೆ ಎದುರು ಪೊಲೀಸರು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಸಂಬಂಧ 11 ಎಫ್‌ಐಆರ್‌ ದಾಖಲಾಗಿ 155 ಮದಿ ಮೇಲೆ ಕೇಸ್‌ ದಾಖಲಾಗಿತ್ತು. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಪೊಲೀಸ್‌ ವಾಹನಗಳಿಗೆ ಹಾನಿಯಾಗಿದ್ದರೆ ಇಬ್ಬರು ಪೊಲೀಸ್‌ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು.  ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್‌ – 108 ಆರೋಪಿಗಳಿಗೆ ಜಾಮೀನು, ದರ್ಗಾದಲ್ಲಿ ಸಂಭ್ರಮಾಚರಣೆ

ಕಳೆದ ವರ್ಷ 2023 ಸೆಪ್ಟೆಂಬರ್‌ನಲ್ಲಿ ಎಲ್ಲಾ ಜಿಲ್ಲೆಗಳ ಎಸ್ಪಿ, ಕಮೀಷನರ್ ಗಳಿಗೆ ಪತ್ರ ಬರೆದಿದ್ದ ಡಿಜಿ-ಐಜಿ ಪತ್ರ ಬರೆದು ನಿಮ್ಮ ಜಿಲ್ಲೆಗಳಲ್ಲಿ ಕೇಸ್ ವಾಪಸ್ ಪಡೆಯುವ ಪ್ರಕರಣಗಳ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದರು.

 

Share This Article