ಬೆಂಗಳೂರು: ಡಿಸೆಂಬರ್ 17ರ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ಕೈಬಿಡಲು ಸರ್ಕಾರ ಮುಂದಾಗಿದೆ.
ಎಂಇಎಸ್‍ನ 38 ಪುಂಡರ ವಿರುದ್ಧ ಪೊಲೀಸರು ದೇಶದ್ರೋಹದ ಪ್ರಕರಣಗಳನ್ನು ಕೈಬಿಟ್ಟು ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಗುರುವಾರ ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಮುಸ್ಲಿಂ ಮುಖಂಡರು
Advertisement
Advertisement
ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸುವುದಾಗಿ ಬೆಳಗಾವಿ ಅಧಿವೇಶನ ಸಾಕ್ಷಿಯಾಗಿ ಸಿಎಂ ಬೊಮ್ಮಾಯಿ ಗುಡುಗಿದ್ದರು. ಬೆಳಗಾವಿ ರಾಜಕಾರಣಿಗಳ ಒತ್ತಡಕ್ಕೆ ತಲೆಬಾಗಿ ಪೊಲೀಸ್ ಇಲಾಖೆ ಈ ರೀತಿ ಮಾಡಿದ್ಯಾ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.
Advertisement
ಸಿಎಂ ಬೊಮ್ಮಾಯಿ ಹೇಳಿಕೆ ಹೊರತಾಗಿಯೂ ಚಾರ್ಜ್‍ಶೀಟ್‍ನಲ್ಲಿ 124(ಎ) ಸೆಕ್ಷನ್ ಕೈಬಿಟ್ಟಿದ್ದೇಕೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಇದೇ ರೀತಿ ಮಾಡಿದರೆ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಕರವೇ ನಾರಾಯಣಗೌಡ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬುರ್ಕಾ ಹಾಕಬೇಕು, ನಮಾಜ್ ಮಾಡಬೇಕು, ಮುಸ್ಲಿಂ ಸಂಸ್ಕೃತಿ ಪಾಲಿಸಬೇಕೆಂದು ಒತ್ತಾಯಿಸುತ್ತಿದ್ದ: ಪತ್ನಿ ನೇರ ಆರೋಪ
Advertisement
ಡಿ.17ರಂದು ರಾತ್ರಿ ಆನಗೋಳದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದ್ದ ಕಿಡಿಗೇಡಿಗಳು, ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಿ ಪುಂಡಾಟ ಪ್ರದರ್ಶಿಸಿದರು.