ಬೆಂಗಳೂರು: ಕನ್ನಡಿಗರನ್ನು ಹರಾಮಿಗಳು ಎಂದಿದ್ದ ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲ್ಯೇಕರ್ ಮತ್ತೊಮ್ಮೆ ಉದ್ಧಟತನ ಮೆರೆದಿದ್ದಾರೆ. ಕರ್ನಾಟಕದ ವಿರುದ್ಧ ಸುಳ್ಳು ಸಾಕ್ಷಿಯ ಆರೋಪ ಮಾಡಿದ್ದಾರೆ.
ಈ ಕುರಿತು ರಾಷ್ಟ್ರೀಯ ಮಾಧ್ಯಮದೊಂದಿಗೆ ಮಾತನಾಡುವ ವೇಳೆ ಮಹದಾಯಿ ಬಗ್ಗೆ ಸುಳ್ಳು ಸಾಕ್ಷಿ ಹೇಳಲು ಕರ್ನಾಟಕ ಸರ್ಕಾರ ಸಾಕ್ಷಿಗಳಿಗೆ 50 ಸಾವಿರ ಲಂಚ ನೀಡುತ್ತಿದೆ. ಗೋವಾ ಸರ್ಕಾರ ಮಾತ್ರ ಸಾಕ್ಷಿಗಳಿಗೆ ನಯಾಪೈಸೆ ಕೊಟ್ಟಿಲ್ಲ ಎಂದು ಮತ್ತೆ ತಮ್ಮ ಬಾಯಿ ಹರಿಬಿಟ್ಟಿದ್ದಾರೆ.
Advertisement
Advertisement
ಮಹದಾಯಿ ಸಮಸ್ಯೆಯ ನ್ಯಾಯಾಧೀಕರಣದ ವಿಚಾರಣೆ ಫೆಬ್ರವರಿ 6 ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಪಾಲ್ಯೇಕರ್ ಮತ್ತೊಮ್ಮೆ ಕರ್ನಾಟಕ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.
Advertisement
ಕೆಲವೇ ದಿನಗಳ ಹಿಂದೆ ಕಣಕುಂಬಿಗೆ ಭೇಟಿ ನೀಡಿದ್ದ ಪಾಲ್ಯೇಕರ್, ಕರ್ನಾಟಕ ಸರ್ಕಾರ ನ್ಯಾಯಾಧೀಕರಣ ಆದೇಶ ವಿರುದ್ಧವಾಗಿ ಡ್ಯಾಂ ನಿರ್ಮಾಣ ಕಾರ್ಯ ನಡೆಸುತ್ತಿದೆ ಎಂದು ಆರೋಪಿಸಿದ್ದರು. ಅಲ್ಲದೇ ಈ ಕುರಿತು ಪಣಜಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಪಾಲ್ಯೇಕರ್ ಕರ್ನಾಟಕದವರು ಹರಾಮಿಗಳು ಎಂದು ಹೇಳಿಕೆ ಕೊಟ್ಟಿದ್ದರು. ನಂತರ ಕನ್ನಡಿಗರ ಆಕ್ರೋಶಕ್ಕೆ ಒಳಗಾದ ಕಾರಣ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದರು.
Advertisement
ಈ ಕುರಿತು ಟ್ವೀಟ್ ಮಾಡಿರುವ ಅವರು, ನ್ಯಾಯಾಧೀಕರಣದ ನಿಯಮಗಳ ಆನ್ವಯ ಮಹದಾಯಿ ನೀರಾವರಿ ಕಮಿಟಿ ಕನಿಷ್ಟ ವಾರಕ್ಕೆ ಒಮ್ಮೆಯಾದರು ವಿವಾದಿತ ಸ್ಥಳಕ್ಕೆ ಭೇಟಿ ನೀಡಬಹುದು. ಅಲ್ಲದೇ ಆ ಪ್ರದೇಶದಲ್ಲಿ ನಡೆಯುವ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯಬಹುದು. ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗುವ ವರದಿಗಳನ್ನು ಪರಿಗಣಿಸಬಹುದು. ಅಗತ್ಯ ವೇಳೆ ಸ್ಥಳಕ್ಕೆ ಭೇಟಿ ನೀಡಿ ವಸ್ತು ಸ್ಥಿತಿ ಬಗ್ಗೆ ಮಾಹಿತಿ, ಸಾಕ್ಷ್ಯ ಸಂಗ್ರಹಿಸಿ ನೀಡಬಹುದು ಎಂಬ ನಿಯಮಗಳ ಪಟ್ಟಿಯ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ಈ ಕುರಿತ ಸರಣಿ ಟ್ವೀಟ್‍ಗಳಲ್ಲಿ ಕರ್ನಾಟಕ ಸಚಿವರು ಯಾವುದೇ ನಿಯಮಗಳನ್ನು ಉಲ್ಲಂಘನೆ ಮಾಡಿ ಅಭಿವೃದ್ಧಿ ಮಾಡಿಲ್ಲ ಎನ್ನುತ್ತಾರೆ. ಆದರೆ ಈ ಕುರಿತು ವಿಡಿಯೋ ಸಮೇತ ಸಾಕ್ಷ್ಯವನ್ನು ನ್ಯಾಯಾಲಯದಕ್ಕೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮಹದಾಯಿ ನದಿ ನೀರಿಗೆ ಗೋವಾ ಕ್ಯಾತೆ ಯಾಕೆ? ಆರಂಭದಿಂದ ಇಲ್ಲಿಯವರೆಗೆ ಏನಾಗಿದೆ? ಇಲ್ಲಿದೆ ಪೂರ್ಣ ಮಾಹಿತಿ
ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲೇಕರ್ ಟ್ವೀಟ್ ಗೆ ರಾಜ್ಯ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಟ್ವಿಟ್ಟರ್ ಮೂಲಕವೇ ತಿರುಗೇಟು ನೀಡಿದ್ದಾರೆ. ನಮ್ಮ ನಾಡ ರಕ್ಷಣೆಯ ಪಾಠ ನಿಮ್ಮಿಂದ ಕಲಿಯಬೇಕಿಲ್ಲ. ನೀವು ಅಲ್ಲ, ನಿಮ್ಮಂತ ಸಾವಿರ ಜನರು ಬಂದರು ನಮನ್ನು ಬಗ್ಗಿಸಲು ಸಾಧ್ಯವಿಲ್ಲ. ಮಹಾದಾಯಿ ಭಿಕ್ಷೆ ಅಲ್ಲ, ಅದು ನಮ್ಮ ಹಕ್ಕು ಎಂದು ಟಾಂಗ್ ನೀಡಿದ್ದಾರೆ.