ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B.S.Yediyurappa) ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ವಿಚಾರಣೆಯನ್ನು ಸೆ.27ಕ್ಕೆ ಹೈಕೋರ್ಟ್ ಮುಂದೂಡಿದೆ.
ಸಿಐಡಿ ಸಲ್ಲಿಸಿದ್ದ ಚಾರ್ಜ್‌ಶೀಟ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ಗೆ ಯಡಿಯೂರಪ್ಪ ಮನವಿ ಸಲ್ಲಿಸಿದ್ದರು. ಸಮಯದ ಅಭಾವದ ಹಿನ್ನೆಲೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಹಿಟ್ಲರ್ ಆಗಿದ್ದಾರೆ – ಬಿಜೆಪಿ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡ್ತಿದ್ದಾರೆ: ಶೋಭಾ ಕರಂದ್ಲಾಜೆ
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಆದೇಶ ಹೊರಡಿಸಿದ್ದಾರೆ. ಅಲ್ಲಿವರೆಗೂ ಹೈಕೋರ್ಟ್‌ನಿಂದ ಮಧ್ಯಂತರ ರಕ್ಷಣೆ ಮುಂದೂಡಿಕೆಯಾಗಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ (POCSO) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಜಾಮೀನಿನ ವಾದ-ಪ್ರತಿವಾದ ಮುಕ್ತಾಯ; ಆದೇಶ ಕಾಯ್ದಿರಿಸಿದ ನ್ಯಾಯಾಧೀಶರು