ಹೆಚ್‌.ಡಿ. ರೇವಣ್ಣ ಕುಟುಂಬವನ್ನ ರಾಜಕೀಯದಿಂದ ಶಾಶ್ವತವಾಗಿ ತೆಗೆಯುವುದೇ ನನ್ನ ಗುರಿ: ದೂರುದಾರ ದೇವರಾಜೇಗೌಡ

Public TV
2 Min Read
prajwal revanna devaraje gowda

– ಸಂಸದ ಸ್ಥಾನದಿಂದ ಅನರ್ಹಗೊಂಡ ಪ್ರಜ್ವಲ್‌ ರೇವಣ್ಣ ವಿರುದ್ಧ ದೂರು ಕೊಟ್ಟಿದ್ದ ವಕೀಲರ ಮಾತು

ಹಾಸನ: ಪ್ರಜ್ವಲ್‌ ರೇವಣ್ಣ (Prajwal Revanna) ಅವರನ್ನು ಸಂಸದ ಸ್ಥಾನದಿಂದ ಹೈಕೋರ್ಟ್‌ (Karnataka High Court) ಅನರ್ಹಗೊಳಿಸಿರುವುದು ಸತ್ಯಕ್ಕೆ ಸಂದ ಜಯ. ಹೆಚ್‌.ಡಿ. ರೇವಣ್ಣ ಅವರ ಕುಟುಂಬವನ್ನು ರಾಜಕೀಯದಿಂದ ಶಾಶ್ವತವಾಗಿ ತೆಗೆಯಬೇಕು ಎಂಬುದೇ ನನ್ನ ಗುರಿ ಎಂದು ದೂರುದಾರ ಮತ್ತು ವಕೀಲ ದೇವರಾಜೇಗೌಡ ಮಾತನಾಡಿದರು.

ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಸಾಮಾನ್ಯ ಹಾಗೂ ಪ್ರಾಮಾಣಿಕ ವಕೀಲನಿಗೆ ಸಿಕ್ಕಿ ಜಯ ಇದು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಇದುವರೆಗೂ ಬಂದ ಆಮಿಷಗಳಿಗೆ ಒಳಗಾಗಲಿಲ್ಲ. ಬೆದರಿಕೆಗೂ ಹೆದರಲಿಲ್ಲ. ಇದೆಲ್ಲದರ ನಡುವೆ ಪ್ರಜ್ವಲ್‌ ರೇವಣ್ಣ ಅವರ ಅಪರಾಧಗಳ ಬಗ್ಗೆ ಸೂಕ್ತ ದಾಖಲಾತಿಗಳೊಂದಿಗೆ ನ್ಯಾಯಾಲಯದ ಮೊರೆ ಹೋಗಿದ್ದೆ. ನ್ಯಾಯಾಲಯದ ಮೇಲೆ ಅಪಾರ ವಿಶ್ವಾಸ ಇತ್ತು. ಯಾರೇ ತಪ್ಪು ಮಾಡಿದ್ದರೂ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತೆ ಎಂದು ನಾನು ಅರ್ಜಿ ಸಲ್ಲಿಸಿದ್ದೆ. ಅಪರಾಧ ಸಾಬೀತಾದ ಹಿನ್ನೆಲೆ ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣರನ್ನ ಅನರ್ಹಗೊಳಿಸಿ ಕೋರ್ಟ್‌ ತೀರ್ಪು ನೀಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾಮಪತ್ರದಲ್ಲಿ ಸುಳ್ಳು ಮಾಹಿತಿ – ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅನರ್ಹ

HD Revanna

23 ಕೋಟಿ ಆಸ್ತಿ ವಿಚಾರ ಮುಚ್ಚಿಟ್ಟಿದ್ದರು. ಬ್ಯಾಂಕ್‌ ಬ್ಯಾಲೆನ್ಸ್‌ ವಿವರವನ್ನೂ ತಪ್ಪು ಕೊಟ್ಟಿದ್ದರು. ಆದಾಯ ತೆರಿಗೆ ಸರಿಯಾಗಿ ಕಟ್ಟದೇ ಸರ್ಕಾರಕ್ಕೆ ವಂಚನೆ ಮಾಡಿದ್ದರು. ಇದೆಲ್ಲವನ್ನು ನಾವು ಸಾಬೀತುಪಡಿಸಿದ್ದೇವೆ. ಅಷ್ಟೇ ಅಲ್ಲದೇ ಚುನಾವಣಾ ಸಂದರ್ಭದಲ್ಲಿ ಪ್ರಜ್ವಲ್‌ ರೇವಣ್ಣ ಪರವಾಗಿ ಅವರ ತಂದೆ 200 ಕ್ಕೂ ಹೆಚ್ಚು ಕಳ್ಳ ವೋಟುಗಳನ್ನು ಹಾಕಿಸಿದ್ದರು. ಅವರು ಜನರಿಗೆ ಹಣ ಹಂಚುವ ದೃಶ್ಯವೂ ಸೆರೆಯಾಗಿತ್ತು. ಇದರ ವಿರುದ್ಧ ಎಫ್‌ಐಆರ್‌ ಕೂಡ ದಾಖಲಾಗಿತ್ತು. ಬಾವಿಕೆರೆ ಗ್ರಾಮದಲ್ಲಿ ಸರ್ಕಾರಿ ಜಾಗವನ್ನ ರಿಜಿಸ್ಟರ್‌ ಮಾಡಿಕೊಂಡಿದ್ದರು. ನಾವು ಮಾಡಿದ ಎಲ್ಲಾ ಆರೋಪಗಳಿಗೂ ಪೂರಕ ದಾಖಲಾತಿಗಳನ್ನು ಒದಗಿಸಿ ಸಾಬೀತುಪಡಿಸಿದ್ದೆವು. ನಮ್ಮ ಹೋರಾಟಕ್ಕೆ ಮತ್ತು ಸತ್ಯಕ್ಕೆ ಜಯ ಸಿಕ್ಕಿದೆ. ಚುನಾವಣೆಯಲ್ಲಿ ನಿಲ್ಲಬೇಕಾದ ವ್ಯಕ್ತಿ ಸ್ವಚ್ಛವಾಗಿ ಇರಬೇಕು ಎಂಬ ಸಂದೇಶವನ್ನು ಕೋರ್ಟ್‌ ತನ್ನ ತೀರ್ಪಿನ ಮೂಲಕ ನೀಡಿದೆ ಎಂದರು.

ನನಗೆ ಪ್ರಾಣ ಬೆದರಿಕೆ ಇತ್ತು. ಎಸ್‌ಪಿ ಅವರು ರಕ್ಷಣೆ ಉದ್ದೇಶದಿಂದ ನನಗೆ ಗನ್‌ಮ್ಯಾನ್‌ ಕೂಡ ಕೊಟ್ಟಿದ್ದರು. ನನ್ನ ಕಾರಿನ ಗಾಜು ಕೂಡ ಹೊಡೆದಿದ್ದರು. ಒಬ್ಬ ವಕೀಲನನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ ಎಂಬ ನಂಬಿಕೆ ನನಗಿತ್ತು. ವಕೀಲನ ಮೇಲೆ ಹಲ್ಲೆ ನಡೆಸಿದರೆ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ. ಸ್ನೇಹಿತರು, ವಕೀಲ ಮಿತ್ರರು ನನ್ನ ಬೆಂಬಲಕ್ಕೆ ನಿಂತಿದ್ದರು. ರಾಜ್ಯದ ಪೊಲೀಸ್‌ ಇಲಾಖೆಗೆ ನಾನು ವಿಶೇಷ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕೆಲಸಕ್ಕೆ ಬಾರದವರು ಬಿಜೆಪಿ ಕಚೇರಿ ನಡೆಸುತ್ತಿದ್ದಾರೆ: ರೇಣುಕಾಚಾರ್ಯ ವಾಗ್ದಾಳಿ

ನಾನು ಕೊಟ್ಟಿರುವ ದೂರು ನೂರಕ್ಕೆ ಕೇವಲ 1 ಭಾಗದಷ್ಟು ಮಾತ್ರ. ಇದನ್ನು ನೀಡುವುದಕ್ಕೆ ನಾನು 4 ವರ್ಷ ತೆಗೆದುಕೊಂಡೆ. ಅಷ್ಟೊಂದು ಅಕ್ರಮ, ಭ್ರಷ್ಟಾಚಾರ ಎಸಗಿದ್ದಾರೆ. ಮುಂದಿನ ದಿನಗಳಲ್ಲಿ ಅದನ್ನು ಕೂಡ ಸಾಬೀತುಪಡಿಸುತ್ತೇನೆ. ನನ್ನ ಹೋರಾಟ ಮುಂದುವರಿಸುತ್ತೇನೆ. ರೇವಣ್ಣ ಅವರ ಕುಟುಂಬವನ್ನು ರಾಜಕೀಯದಿಂದ ಶಾಶ್ವತವಾಗಿ ತೆಗೆಯಬೇಕು ಎಂಬುದು ನನ್ನ ಗುರಿ. ಅವರಿಂದ ಎಷ್ಟು ಕುಟುಂಬಗಳ ಜೀವನ ಹಾಳಾಗಿದೆ. ಯಾರ‍್ಯಾರಿಗೆ ಅನ್ಯಾಯ ಆಗಿದೆ ಎಂಬ ಬಗ್ಗೆ ರಾಜ್ಯದ ಜನತೆ ಮುಂದೆ ಹೇಳುತ್ತೇನೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article