ನವದೆಹಲಿ: ಹಿಜಬ್‌ಗೆ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಕೆಟ್ಟದಾಗಿ ತೀರ್ಪು ನೀಡಿದೆ. ಇಸ್ಲಾಂ ಧರ್ಮದಲ್ಲಿ ಹಿಜಬ್ ಧರಿಸುವುದು ಅಗತ್ಯವಾಗಿದೆ ಎಂದು ಹಿರಿಯ ವಕೀಲ ಎಎಂ ಧಾರ್ ಅಭಿಪ್ರಾಯಪಟ್ಟಿದ್ದಾರೆ.
ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು. ಅಂತಿಮವಾಗಿ ನ್ಯಾಯವು ಮೇಲುಗೈ ಸಾಧಿಸುವ ಭರವಸೆ ಇದೆ ಎಂದು ವಕೀಲ ಹೇಳಿದ್ದಾರೆ. ಇದನ್ನೂ ಓದಿ: ಹಿಜಬ್- ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಬ್ ಅನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತು.
ಹಿಜಬ್ ಧರಿಸುವುದು ಇಸ್ಲಾಂ ಧರ್ಮದ ಅಗತ್ಯ ಆಚರಣೆಯಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ್ದು, ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ಇದನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯೊಬ್ಬರು ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ನಾವು ಕುರಾನ್ ಫಾಲೋ ಮಾಡುತ್ತೇವೆ, ನಮ್ಮ ನಿಲುವಿನಲ್ಲಿ ಕಾಂಪ್ರಮೈಸ್ ಇಲ್ಲ: ಆಲಿಯಾ ಅಸ್ಸಾದಿ