ಬೆಂಗಳೂರು: ಕೋವಿಡ್ ಸಂಕಷ್ಟದ ಸಮಯದಲ್ಲಿ ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ. ಈ ಪೈಕಿ ಈವೆರೆಗೆ ಪ್ರತಿಕ್ರಿಯೆ ನೀಡದ 30 ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ 577 ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿತ್ತು. ಈ ಪೈಕಿ 450ಕ್ಕೂ ಹೆಚ್ಚು ಆಸ್ಪತ್ರೆಗಳು ನೋಟಿಸ್‌ಗೆ ಪ್ರತಿಕ್ರಿಯೆ ನೀಡಿವೆ. ಹೆಚ್ಚುವರಿಯಾಗಿ ವಸೂಲಿ ಮಾಡಿದ್ದ ಹಣವನ್ನೂ ವಾಪಸ್ ನೀಡಿವೆ. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡದ 30 ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಸಿದ್ದರಾಮಯ್ಯನವರ ಜನಪ್ರಿಯತೆ ನೋಡಿ ಉರಿ ಶುರುವಾಗಿದೆ: ಡಾ. ಎಚ್.ಸಿ. ಮಹದೇವಪ್ಪ
ಕೆಲವು ಆಸ್ಪತ್ರೆಗಳು ಕೋವಿಡ್ ಸಮಯದಲ್ಲಿ ರೋಗಿಗಳ ಶುಲ್ಕ ಪಡೆಯುವ ಜೊತೆಗೆ ಸರ್ಕಾರದಿಂದಲೂ ಹಣ ಪಡೆದಿವೆ ಎಂದು ಇಲಾಖೆ ಹೇಳಿದೆ. ಇದನ್ನೂ ಓದಿ: ಆರ್ಯವರ್ಧನ್ ಪಾತ್ರಕ್ಕೆ ಅನಿರುದ್ಧ ಪಡೆದುಕೊಳ್ಳುತ್ತಿದ್ದ ಸಂಭಾವನೆ ಬಹಿರಂಗ
ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಅಡಿಯಲ್ಲಿ ಚಿಕಿತ್ಸೆ ನೀಡಲು ಆದೇಶಿಸಿತ್ತು. ಅದಕ್ಕಾಗಿ ಸಂಬಂಧಪಟ್ಟ ಆಸ್ಪತ್ರೆಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನಿಂದ ವೆಚ್ಚ ಬರಿಸಿತ್ತು. ಆದರೂ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗಿದೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನೋಟಿಸ್ ನೀಡಿತ್ತು. ಆದರೆ 30 ಆಸ್ಪತ್ರೆಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.