Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಬೆಂಗ್ಳೂರಲ್ಲಿ ಮಳೆಯ ರುದ್ರ ನರ್ತನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ಬೆಂಗ್ಳೂರಲ್ಲಿ ಮಳೆಯ ರುದ್ರ ನರ್ತನ

Bengaluru City

ಮತ್ತೆ ಬೆಂಗ್ಳೂರಲ್ಲಿ ಮಳೆಯ ರುದ್ರ ನರ್ತನ

Public TV
Last updated: September 24, 2018 11:40 pm
Public TV
Share
2 Min Read
BNG RAIN copy
SHARE

ಬೆಂಗಳೂರು: ಭಾನುವಾರ ರಾತ್ರಿಯಷ್ಟೇ ಸುರಿದ ಭಾರೀ ಮಳೆಗೆ ತತ್ತರಿಸಿದ್ದ ಬೆಂಗಳೂರಿನಲ್ಲಿ ಮತ್ತೆ ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಿದೆ.

ನಗರದ ಪ್ರಮುಖ ಪ್ರದೇಶಗಳಾದ ವಿಜಯನಗರ, ನಾಗರಭಾವಿ, ಮೈಸೂರು ರೋಡ್, ಬಿಟಿಎಮ್ ಲೇಔಟ್, ಎಚ್.ಎಸ್.ಆರ್ ಲೇಔಟ್, ಬೊಮ್ಮನಹಳ್ಳಿ, ಬನ್ನೇರುಗಟ್ಟ, ಲಾಲ್ ಬಾಗ್, ಕೆಆರ್ ಮಾರ್ಕೆಟ್, ಮಲ್ಲೇಶ್ವರಂ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆಯಾಗಿದೆ.

vlcsnap 2018 09 24 23h17m23s33

ಮೈಸೂರು ರಸ್ತೆಯ ನಾಯಂಡನಹಳ್ಳಿ ಬಳಿಯ ರಾಜಕಾಲುವೆ ಮತ್ತೆ ಉಕ್ಕಿ ಹರಿದಿದ್ದು, ರಸ್ತೆ ಮೇಲೆ ವಾಹನಗಳು ಮುಳುಗುವ ಹಂತದವರೆಗೂ ನೀರು ಹರಿಯುತ್ತಿತ್ತು. ಇದರಿಂದ ಸುತ್ತಮುತ್ತಲಿನ ಅಂಗಡಿ, ವಸತಿ ಪ್ರದೇಶಗಳಿಗೂ ನೀರು ನುಗ್ಗಿ ವಸ್ತುಗಳೆಲ್ಲ ನೀರಿನಲ್ಲಿ ತೇಲಿ ಬರುತ್ತಿದ್ದವು. ಮತ್ತಿಕೆರೆ, ಗಿರಿನಗರ ಸುತ್ತಮುತ್ತ ಹಲವು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರಿಳಿದು ಅವಾಂತರ ಸೃಷ್ಟಿಯಾಗಿತ್ತು. ಜಯನಗರ, ಮಾರೇನಹಳ್ಳಿ, ಗೋವಿಂದ ರಾಜನಗರದ ಕೆಲ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿತ್ತು. ಮನೆಗೆ ನುಗ್ಗಿದ್ದ ನೀರನ್ನ ಹೊರ ಹಾಕುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು. ಭಾರೀ ಮಳೆಗೆ ನಗರದ ಹಲವಡೆ ವಿದ್ಯುತ್ ಸಮಸ್ಯೆ ಉಂಟಾಗಿದೆ.

ಉಳಿದಂತೆ ಹಲವೆಡೆ ರಸ್ತೆ ಮೇಲೆ ಮರಗಳು ಉರುಳಿಬಿದ್ದ ಪರಿಣಾಮ ವಾಹನ ಸವಾರರೇ ರಸ್ತೆ ಮೇಲೆ ಬಿದ್ದಿದ್ದ ಮರಗಳನ್ನು ತೆರವು ಮಾಡಲು ಮುಂದಾಗಿದ್ದರು. ಭಾರೀ ಮಳೆಗೆ ರಸ್ತೆ ಮೇಲೆ ನೀರು ಹರಿಯುತ್ತಿದ್ದ ಕಾರಣ ಬೈಕ್, ಕಾರು, ಬಸ್ ಸೇರಿದಂತೆ ವಾಹನಗಳು ಸಾಗಲು ಸಾಧ್ಯವಾಗದೆ ಸಮಸ್ಯೆ ಸೃಷ್ಟಿಯಾಗಿತ್ತು. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿದ್ದರು.

vlcsnap 2018 09 24 23h16m44s154

ಕೇವಲ ಅರ್ಧ ಗಂಟೆ ಅವಧಿಯಲ್ಲಿ ಪಟ್ಟಾಭಿರಾಮನಗರ 80 ಮಿಮೀ, ಬಿಳೇಕಳ್ಳಿ 70 ಮಿಮೀ, ಸಾರಕ್ಕಿ 98 ಮಿ.ಮೀ, ಬನ್ನೇರುಘಟ್ಟ 114 ಮಿ ಮೀ, ಕೋಣನಕುಂಟೆ 68 ಮಿ.ಮೀ ಪ್ರಮಾಣದಲ್ಲಿ ದಾಖಲೆಯ ಮಳೆಯಾಗಿದೆ.

ಸಿಎಂ ಸೂಚನೆ: ಭಾರೀ ಮಳೆ ಕುರಿತು ಸಿಎಂ ಕುಮಾರಸ್ವಾಮಿ ಬಿಬಿಎಂಪಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಹವಾಮಾನ ಇಲಾಖೆ ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ನಗರದ ತಗ್ಗು ಪ್ರದೇಶದಲ್ಲಿ ನೆಲೆಸಿರುವವರು ಅಪಾಯದ ಬಗ್ಗೆ ಮುನ್ನೆಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದ್ದಾರೆ.

vlcsnap 2018 09 24 23h14m36s139

ದಟ್ಟ ಮೋಡಗಳ ಸಾಲು ನಿರ್ಮಾಣವಾಗಿರುವ ಕಾರಣ ನೈರುತ್ಯ ಮುಂಗಾರು ರಾಜ್ಯದಲ್ಲಿ ಮತ್ತೆ ಚುರುಕಾಗಿದೆ. ಪರಿಣಾಮವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಪ್ರದೇಶಗಳ್ಲಿ ಸೆ.29 ರವರೆಗೆ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದರು. ಬೆಂಗಳೂರು, ದಕ್ಷಿಣ ಕನ್ನಡ, ತುಮಕೂರು ಮತ್ತು ಮಂಡ್ಯದಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲಾಧಿಕಾರಿಗಳಿಗೆ ಅಲರ್ಟ್ ಆಗಿರುವಂತೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಿತ್ತು.

ಹವಾಮಾನ ಇಲಾಖೆಯ ಪ್ರಕಾರ ಇನ್ನೂ ಎರಡು ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದೇನೆ.

ನಗರದ ತಗ್ಗು ಪ್ರದೇಶದಲ್ಲಿ ನೆಲೆಸಿರುವವರು ಅಪಾಯದ ಬಗ್ಗೆ ಮುನ್ನೆಚ್ಚರಿಕೆಯಿಂದ ಇರಬೇಕು.

— CM of Karnataka (@CMofKarnataka) September 24, 2018

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:BangalorebbmpCM KumaraswamyMeteorological DepartmentPublic TVrainwaterನೀರುಪಬ್ಲಿಕ್ ಟಿವಿಬಿಬಿಎಂಪಿಬೆಂಗಳೂರುಮಳೆಸಿಎಂ ಕುಮಾರಸ್ವಾಮಿಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Accident on bengaluru mysuru expressway car overturns on side road
Districts

ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು

Public TV
By Public TV
13 minutes ago
income tax returns
Latest

ಆದಾಯ ತೆರಿಗೆ ಪದ್ದತಿಯಲ್ಲಿ ಏನು ಬದಲಾವಣೆ? ಇಲ್ಲಿದೆ ಪೂರ್ಣ ವಿವರ

Public TV
By Public TV
32 minutes ago
gajendra elephant
Bengaluru City

ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

Public TV
By Public TV
39 minutes ago
AI Image
Bagalkot

ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

Public TV
By Public TV
47 minutes ago
g.parameshwara 2
Bengaluru City

ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

Public TV
By Public TV
1 hour ago
FLY19
Bengaluru City

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY19 ವಿಮಾನಯಾನ ಸೇವೆ ಶೀಘ್ರವೇ ಆರಂಭ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?