ಬೆಂಗಳೂರು: ಭಾನುವಾರ ರಾತ್ರಿಯಷ್ಟೇ ಸುರಿದ ಭಾರೀ ಮಳೆಗೆ ತತ್ತರಿಸಿದ್ದ ಬೆಂಗಳೂರಿನಲ್ಲಿ ಮತ್ತೆ ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಿದೆ.
ನಗರದ ಪ್ರಮುಖ ಪ್ರದೇಶಗಳಾದ ವಿಜಯನಗರ, ನಾಗರಭಾವಿ, ಮೈಸೂರು ರೋಡ್, ಬಿಟಿಎಮ್ ಲೇಔಟ್, ಎಚ್.ಎಸ್.ಆರ್ ಲೇಔಟ್, ಬೊಮ್ಮನಹಳ್ಳಿ, ಬನ್ನೇರುಗಟ್ಟ, ಲಾಲ್ ಬಾಗ್, ಕೆಆರ್ ಮಾರ್ಕೆಟ್, ಮಲ್ಲೇಶ್ವರಂ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆಯಾಗಿದೆ.
Advertisement
Advertisement
ಮೈಸೂರು ರಸ್ತೆಯ ನಾಯಂಡನಹಳ್ಳಿ ಬಳಿಯ ರಾಜಕಾಲುವೆ ಮತ್ತೆ ಉಕ್ಕಿ ಹರಿದಿದ್ದು, ರಸ್ತೆ ಮೇಲೆ ವಾಹನಗಳು ಮುಳುಗುವ ಹಂತದವರೆಗೂ ನೀರು ಹರಿಯುತ್ತಿತ್ತು. ಇದರಿಂದ ಸುತ್ತಮುತ್ತಲಿನ ಅಂಗಡಿ, ವಸತಿ ಪ್ರದೇಶಗಳಿಗೂ ನೀರು ನುಗ್ಗಿ ವಸ್ತುಗಳೆಲ್ಲ ನೀರಿನಲ್ಲಿ ತೇಲಿ ಬರುತ್ತಿದ್ದವು. ಮತ್ತಿಕೆರೆ, ಗಿರಿನಗರ ಸುತ್ತಮುತ್ತ ಹಲವು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರಿಳಿದು ಅವಾಂತರ ಸೃಷ್ಟಿಯಾಗಿತ್ತು. ಜಯನಗರ, ಮಾರೇನಹಳ್ಳಿ, ಗೋವಿಂದ ರಾಜನಗರದ ಕೆಲ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿತ್ತು. ಮನೆಗೆ ನುಗ್ಗಿದ್ದ ನೀರನ್ನ ಹೊರ ಹಾಕುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು. ಭಾರೀ ಮಳೆಗೆ ನಗರದ ಹಲವಡೆ ವಿದ್ಯುತ್ ಸಮಸ್ಯೆ ಉಂಟಾಗಿದೆ.
Advertisement
ಉಳಿದಂತೆ ಹಲವೆಡೆ ರಸ್ತೆ ಮೇಲೆ ಮರಗಳು ಉರುಳಿಬಿದ್ದ ಪರಿಣಾಮ ವಾಹನ ಸವಾರರೇ ರಸ್ತೆ ಮೇಲೆ ಬಿದ್ದಿದ್ದ ಮರಗಳನ್ನು ತೆರವು ಮಾಡಲು ಮುಂದಾಗಿದ್ದರು. ಭಾರೀ ಮಳೆಗೆ ರಸ್ತೆ ಮೇಲೆ ನೀರು ಹರಿಯುತ್ತಿದ್ದ ಕಾರಣ ಬೈಕ್, ಕಾರು, ಬಸ್ ಸೇರಿದಂತೆ ವಾಹನಗಳು ಸಾಗಲು ಸಾಧ್ಯವಾಗದೆ ಸಮಸ್ಯೆ ಸೃಷ್ಟಿಯಾಗಿತ್ತು. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿದ್ದರು.
Advertisement
ಕೇವಲ ಅರ್ಧ ಗಂಟೆ ಅವಧಿಯಲ್ಲಿ ಪಟ್ಟಾಭಿರಾಮನಗರ 80 ಮಿಮೀ, ಬಿಳೇಕಳ್ಳಿ 70 ಮಿಮೀ, ಸಾರಕ್ಕಿ 98 ಮಿ.ಮೀ, ಬನ್ನೇರುಘಟ್ಟ 114 ಮಿ ಮೀ, ಕೋಣನಕುಂಟೆ 68 ಮಿ.ಮೀ ಪ್ರಮಾಣದಲ್ಲಿ ದಾಖಲೆಯ ಮಳೆಯಾಗಿದೆ.
ಸಿಎಂ ಸೂಚನೆ: ಭಾರೀ ಮಳೆ ಕುರಿತು ಸಿಎಂ ಕುಮಾರಸ್ವಾಮಿ ಬಿಬಿಎಂಪಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಹವಾಮಾನ ಇಲಾಖೆ ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ನಗರದ ತಗ್ಗು ಪ್ರದೇಶದಲ್ಲಿ ನೆಲೆಸಿರುವವರು ಅಪಾಯದ ಬಗ್ಗೆ ಮುನ್ನೆಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದ್ದಾರೆ.
ದಟ್ಟ ಮೋಡಗಳ ಸಾಲು ನಿರ್ಮಾಣವಾಗಿರುವ ಕಾರಣ ನೈರುತ್ಯ ಮುಂಗಾರು ರಾಜ್ಯದಲ್ಲಿ ಮತ್ತೆ ಚುರುಕಾಗಿದೆ. ಪರಿಣಾಮವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಪ್ರದೇಶಗಳ್ಲಿ ಸೆ.29 ರವರೆಗೆ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದರು. ಬೆಂಗಳೂರು, ದಕ್ಷಿಣ ಕನ್ನಡ, ತುಮಕೂರು ಮತ್ತು ಮಂಡ್ಯದಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲಾಧಿಕಾರಿಗಳಿಗೆ ಅಲರ್ಟ್ ಆಗಿರುವಂತೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಿತ್ತು.
ಹವಾಮಾನ ಇಲಾಖೆಯ ಪ್ರಕಾರ ಇನ್ನೂ ಎರಡು ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದೇನೆ.
ನಗರದ ತಗ್ಗು ಪ್ರದೇಶದಲ್ಲಿ ನೆಲೆಸಿರುವವರು ಅಪಾಯದ ಬಗ್ಗೆ ಮುನ್ನೆಚ್ಚರಿಕೆಯಿಂದ ಇರಬೇಕು.
— CM of Karnataka (@CMofKarnataka) September 24, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv